ನಹೂಮ 1:6 - ಕನ್ನಡ ಸತ್ಯವೇದವು J.V. (BSI)6 ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನ ಮಹಾ ರೌದ್ರಕ್ಕೆದುರಾಗಿ ಯಾರೂ ನಿಲ್ಲಲಾರರು. ಯಾರೂ ಆ ಮಹಾ ಕೋಪವನ್ನು ಸಹಿಸಲು ಸಾಧ್ಯವಿಲ್ಲ. ಆತನ ಕೋಪವು ಬೆಂಕಿಯಂತೆ ದಹಿಸುವದು. ಆತನು ಬರುವಾಗ ಬಂಡೆಯು ಪುಡಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ. ಅಧ್ಯಾಯವನ್ನು ನೋಡಿ |