Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:7 - ಕನ್ನಡ ಸತ್ಯವೇದವು J.V. (BSI)

7 ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಒಳ್ಳೆಯವನು. ಕಷ್ಟದ ಸಮಯದಲ್ಲಿ ಆತನು ಆಶ್ರಯಸ್ಥಾನ. ಆತನ ಮೇಲೆ ಭರವಸವಿಡುವವರನ್ನು ಸಂರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:7
53 ತಿಳಿವುಗಳ ಹೋಲಿಕೆ  

ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ; ನಾನು ಅವುಗಳನ್ನು ಬಲ್ಲೆನು; ಅವು ನನ್ನ ಹಿಂದೆ ಬರುತ್ತವೆ.


ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.


ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.


ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.


ಅಪಾಯಕಾಲದಲ್ಲಿ ಆತನು ನನ್ನನ್ನು ಗುಪ್ತಸ್ಥಳದಲ್ಲಿ ಅಡಗಿಸುವನು; ತನ್ನ ಗುಡಾರವೆಂಬ ಆಶ್ರಯಸ್ಥಾನದಲ್ಲಿ ನನ್ನನ್ನು ಭದ್ರಪಡಿಸುವನು; ಪರ್ವತಾಗ್ರದಲ್ಲಿ ನನ್ನನ್ನು ಸುರಕ್ಷಿತವಾಗಿ ಇರಿಸುವನು.


ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವದು.


ಈಗಲಾದರೋ ನೀವು ದೇವರನ್ನು ತಿಳುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ. ಹೀಗಿರಲಾಗಿ ನೀವು ಕೆಲಸಕ್ಕೆ ಬಾರದ ದರಿದ್ರಬಾಲಬೋಧೆಗೆ ಮತ್ತೂ ಅಧೀನರಾಗಬೇಕೆಂದು ಅಪೇಕ್ಷಿಸಿ ಪುನಃ ಅದಕ್ಕೆ ತಿರುಗಿಕೊಳ್ಳುವದು ಹೇಗೆ?


ನೀನು ದೀನರಿಗೆ ಕೋಟೆ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣದುರ್ಗ, ಬಿಸಿಲಿಗೆ ನೆರಳು, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವದು.


ಉಲ್ಲಾಸ ಕೋಲಾಹಲ, ವಧೂವರರ ಸ್ವರ, ಇವುಗಳು ಕೇಳ ಬರುವವು. ಸೇನಾಧೀಶ್ವರನಾದ ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಯೆಹೋವನು, ಒಳ್ಳೆಯವನು, ಆತನ ಕೃಪೆಯು ಶಾಶ್ವತ ಎಂದು ಕೀರ್ತಿಸುತ್ತಾ ಕೃತಜ್ಞತಾಬಲಿಯನ್ನು ಯೆಹೋವನ ಆಲಯಕ್ಕೆ ತರುವವರ ಗಾನವೂ ಕಿವಿಗೆ ಬೀಳುವದು. ನಾನು ದೇಶವನ್ನು ದುರವಸ್ಥೆಯಿಂದ ತಪ್ಪಿಸಿ ಪೂರ್ವಸ್ಥಿತಿಗೆ ತರುವೆನು.


ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.


ಮತ್ತು ಒಬ್ಬ ಪುರುಷನು ಗಾಳಿಯಲ್ಲಿ ಮರೆಯಂತೆಯೂ ಅತಿವೃಷ್ಟಿಯಲ್ಲಿ ಆವರಣದ ಹಾಗೂ ಮರುಭೂವಿುಯಲ್ಲಿ ನೀರಿನ ಕಾಲುವೆಗಳ ಪ್ರಕಾರವೂ ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು.


ಯೆಹೋವನು ದಯಾಳುವೂ ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡಿಸುವನು.


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ನಾನು ಯಾವಾಗಲೂ ಮರೆಹೊಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ ಕೋಟೆಯೂ ಆಗಿದ್ದೀಯಲ್ಲಾ.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು.


ಆಗ ನಾನು ಅವರಿಗೆ - ನಾನೆಂದೂ ನಿಮ್ಮ ಗುರುತು ಕಾಣೆನು; ಧರ್ಮವನ್ನು ಮೀರಿನಡೆಯುವವರೇ, ನನ್ನಿಂದ ತೊಲಗಿಹೋಗಿರಿ ಎಂದು ಎಲ್ಲರ ಮುಂದೆ ಹೇಳಿಬಿಡುವೆನು.


ಪರಸ್ಪರವಾಗಿ ಹಾಡುತ್ತಾ ಯೆಹೋವನನ್ನು ಕೀರ್ತಿಸುತ್ತಾ - ಆತನು ಒಳ್ಳೆಯವನು; ಆತನ ಕೃಪೆಯು ಇಸ್ರಾಯೇಲ್ಯರ ಮೇಲೆ ಶಾಶ್ವತವಾದದ್ದೆಂದು ಕೃತಜ್ಞತಾಸ್ತುತಿಮಾಡಿದರು. ಯೆಹೋವ ಕೀರ್ತನೆ ಕೇಳಿಸಿದ ಕೂಡಲೆ ಯೆಹೋವನ ಆಲಯದ ಅಸ್ತಿವಾರವು ಹಾಕಲ್ಪಟ್ಟಿರುತ್ತದೆಂದು ಜನರೆಲ್ಲರೂ ಉತ್ಸಾಹ ಧ್ವನಿಯಿಂದ ಆರ್ಭಟಿಸಿದರು.


ಹಿಜ್ಕೀಯನು - ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವದಕ್ಕೆ ಪ್ರಯತ್ನಿಸುತ್ತಿರುವದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವದಕ್ಕೇ ಅಲ್ಲವೋ?


ಅವನಿಗಿರುವ ಸಹಾಯವು ಮಾಂಸದ ತೋಳು; ನಮಗಾದರೋ ನಮ್ಮ ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸವುಳ್ಳವರಾದರು.


ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.


ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.


ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿಬಿಡುವನು; ಅವರು ಆತನ ಆಶ್ರಿತರಾದ್ದರಿಂದ ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ನನಗೆ ಭಯಾಸ್ಪದವಾಗಬೇಡ; ಕೇಡಿನ ಕಾಲದಲ್ಲಿ ನನಗೆ ಆಶ್ರಯವಾಗಿದ್ದೀ.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ಸ್ಥಳದೊಳಗಿಂದ ಕಸ್ದೀಯರ ದೇಶಕ್ಕೆ ಕಳುಹಿಸಿಬಿಟ್ಟ ಸೆರೆಯವರಾದ ಯೆಹೂದ್ಯರನ್ನು ಈ ಉತ್ತಮವಾದ ಅಂಜೂರದ ಫಲಗಳಂತೆ ಲಕ್ಷಿಸಿ ಅವರಿಗೆ ಮೇಲನ್ನುಂಟುಮಾಡುವೆನು.


ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇವಿುನಿಂದ ದನಿಗೈಯುತ್ತಾನೆ; ಭೂಮ್ಯಾಕಾಶಗಳು ನಡುಗುತ್ತವೆ. ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ ಇಸ್ರಾಯೇಲ್ಯರಿಗೆ ರಕ್ಷಣದುರ್ಗವೂ ಆಗುವನು.


ದೀನದರಿದ್ರಜನವನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು.


ಹೀಗೆ ಇಸ್ರಾಯೇಲ್ಯರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನಲ್ಲಿ ಭರವಸವಿಟ್ಟದರಿಂದ ಬಲಗೊಂಡರು.


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ.


ಆದದರಿಂದ ಭೂವಿುಯು ಮಾರ್ಪಟ್ಟರೂ ಬೆಟ್ಟಗಳು ಸಮುದ್ರದಲ್ಲಿ ಮುಣುಗಿಹೋದರೂ ನಮಗೇನೂ ಭಯವಿಲ್ಲ.


ನಿಮ್ಮೊಳಗೆ ಯಾವನು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವನು? ಕತ್ತಲಲ್ಲಿ ನಡೆಯುತ್ತಾ ಬೆಳಕಿಲ್ಲದವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು