ನಹೂಮ 1:8 - ಕನ್ನಡ ಸತ್ಯವೇದವು J.V. (BSI)8 ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನೆವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ಆತನು ತನ್ನ ವೈರಿಗಳನ್ನು ಪೂರ್ತಿಯಾಗಿ ನಾಶಮಾಡುತ್ತಾನೆ. ತೆರೆಯಂತೆ ಅವರನ್ನು ಕೊಚ್ಚಿಕೊಂಡು ಹೋಗುತ್ತಾನೆ. ಕತ್ತಲೆಯ ಕಡೆಗೆ ವೈರಿಗಳನ್ನು ಅಟ್ಟಿಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು. ಅಧ್ಯಾಯವನ್ನು ನೋಡಿ |