ನಹೂಮ 2:1 - ಕನ್ನಡ ಸತ್ಯವೇದವು J.V. (BSI)1 [ನಿನೆವೆಯೇ,] ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ಕಾಯಿ, ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಿನವೆಯೇ, ನಿನ್ನನ್ನು ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ರಕ್ಷಿಸಲು ಸಿದ್ಧನಾಗು. ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಿನೆವೆಯೇ, ನಿನಗೆದುರಾಗಿ ನಿಂತಿಹನು, ನಿನ್ನನ್ನು ಚದುರಿಸುವವನು! ಕಾವಲಿಡು ಕೋಟೆಯ ಸುತ್ತಲು ಪಹರೆಯಿಡು ದಾರಿ ಕಾಯಲು; ಅಣಿಯಾಗಲಿ ನಿನ್ನ ಸೈನ್ಯವಿಡೀ, ನಡುಕಟ್ಟಿ ನಿಲ್ಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ವೈರಿಯು ನಿನ್ನ ಮೇಲೆ ಬರುವನು. ಆದ್ದರಿಂದ ನಿನ್ನ ಪಟ್ಟಣದ ಬುರುಜುಗಳನ್ನು ಕಾಯಿ. ಮಾರ್ಗದ ಮೇಲೆ ಕಣ್ಣಿಡು. ಯುದ್ಧಕ್ಕೆ ತಯಾರಾಗು. ರಣರಂಗಕ್ಕೆ ಹೋಗಲು ಸಿದ್ಧನಾಗು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಿನೆವೆಯೇ, ಮುತ್ತಿಗೆ ಹಾಕುವವನು ನಿನಗೆ ವಿರೋಧವಾಗಿ ಹೊರಟಿದ್ದಾನೆ, ಕೋಟೆಯನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ; ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿಮಾಡಿಕೋ. ಅಧ್ಯಾಯವನ್ನು ನೋಡಿ |