Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:13 - ಕನ್ನಡ ಸತ್ಯವೇದವು J.V. (BSI)

13 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ನುಂಗಿಬಿಡುವದು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು, ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿನೆವೆಯೇ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಸುಟ್ಟುಹಾಕುತ್ತೇನೆ. ನಿನ್ನ ಎಳೆ ಸಿಂಹಗಳನ್ನು ರಣರಂಗದಲ್ಲಿ ಸಾಯಿಸುತ್ತೇನೆ. ಈ ಭೂಮಿಯ ಮೇಲೆ ಇನ್ನು ಯಾರನ್ನೂ ಭೇಟಿ ಮಾಡದಿರುವೆ. ನಿನ್ನ ಸಂದೇಶವಾಹಕರಿಂದ ಕೆಟ್ಟ ಸಮಾಚಾರವನ್ನು ಜನರು ಇನ್ನು ಎಂದಿಗೂ ಕೇಳರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:13
33 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ಕಾಣಿಸುವೆನು.


ಆಹಾ, ತಗ್ಗಿನ ನಗರಿಯೇ, ಪ್ರಸ್ಥಭೂವಿುಯ ಶಿಖರದ ಮೇಲಣ ಪುರಿಯೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಯಾರು ಇಳಿದು ನಮ್ಮ ಮೇಲೆ ಬಂದಾರು, ನಮ್ಮ ನಿವಾಸಗಳಲ್ಲಿ ಯಾರು ನುಗ್ಗಿಯಾರು ಎನ್ನುವವರೇ,


ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ನಿಲ್ಲಿಸಿಬಿಟ್ಟಿದ್ದಾನೆ; ಬಿಲ್ಲುಗಳನ್ನೂ ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.


ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ; ಅಲ್ಲಿನ ಬಹುದೂರ ನಿವಾಸಸ್ಥಳವನ್ನೂ ಉದ್ಯಾನ ವನಗಳನ್ನೂ ಪ್ರವೇಶಿಸಿದ್ದೇನೆ;


ಅಯ್ಯೋ, ರಕ್ತಮಯಪುರಿಯ ಗತಿಯನ್ನು ಏನೆಂದು ಹೇಳಲಿ! ಅದು ಸುಳ್ಳಿನಿಂದಲೂ ಸುಲಿಗೆಯಿಂದಲೂ ತುಂಬಿದೆ; ಕೊಳ್ಳೆಹೊಡೆಯುವದನ್ನು ಬಿಡುವದೇ ಇಲ್ಲ.


ಇಗೋ, ನಾನೇ ನಿನಗೆ ವಿರುದ್ಧನಾಗಿದ್ದೇನೆ, ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಕರ್ತನಾದ ಯೆಹೋವನ ನುಡಿ.


ಅಷ್ಟರಲ್ಲಿ ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಹೊರಟಿದ್ದಾನೆಂಬ ಸುದ್ದಿಯನ್ನು ಕೇಳಿ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ


ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಟ್ಟನು.


ನಿನ್ನ ಕೋಟೆಗಳೆಲ್ಲಾ ಮೊದಲು ಮಾಗಿದ ಹಣ್ಣುಳ್ಳ ಅಂಜೂರದ ಮರಗಳಂತಿರುವವು; ಆ ಮರಗಳನ್ನು ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವದು.


ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ದೈವೋಕ್ತಿಯನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರೋಷ್ ಮೆಷೆಕ್ ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ,


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ರೋಷ್ ಮೆಷೆಕ್ ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ,


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಸೇಯೀರ್‍ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳುಪಾಳುಮಾಡುವೆನು.


ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಐಗುಪ್ತದೇಶವನ್ನು ವಿುಗ್ದೋಲಿನಿಂದ ಸೆವೇನೆಯ ತನಕ, ಹೌದು ಕೂಷಿನ ಎಲ್ಲೆಯವರೆಗೂ ತೀರಾ ಹಾಳುಪಾಳು ಮಾಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದ ಅರಸನಾದ ಫರೋಹನೇ, ನಿನ್ನ ನದೀ ಶಾಖೆಗಳ ನಡುವೆ ಒರಗಿಕೊಂಡು - ಈ ನದಿಯು ನನ್ನದೇ, ನನಗಾಗಿಯೇ ಮಾಡಿಕೊಂಡದು ಅಂದುಕೊಳ್ಳುವ ಪೇರ್ಮೊಸಳೆಯೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಚೀದೋನೇ, ನಾನು ನಿನಗೆ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣವನ್ನು ದಂಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ನಾನೇ ಯೆಹೋವನು ಎಂದು ಎಲ್ಲರಿಗೂ ಗೊತ್ತಾಗುವದು.


ಕರ್ತನಾದ ಯೆಹೋವನು ಇಂತೆನ್ನುತಾನೆ - ಇಗೋ, ತೂರೇ, ನಿನಗೆ ವಿರುದ್ಧನಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


ಯೆಹೋವನು ಇಂತೆನ್ನುತ್ತಾನೆ - ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಜರಿಯ ಮೇಲಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನಗೆ ವಿರುದ್ಧನು; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.


ಯೆರೂಸಲೇವಿುನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನೋ ಎಂಬಂತೆ ಆತನ ವಿಷಯದಲ್ಲಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೂದಾಯ ಭಾಷೆಯಲ್ಲಿ ಮಾತಾಡಿದರು.


ರಬ್ಷಾಕೆಯು ಅವರಿಗೆ - ನೀವು ಹೋಗಿ ಹಿಜ್ಕೀಯನಿಗೆ ಮಹಾರಾಜನಾದ ಅಶ್ಶೂರದ ಅರಸನ ಮಾತುಗಳನ್ನು ತಿಳಿಸಿರಿ.


ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಯೆರೂಸಲೇವಿುನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇವಿುಗೆ ಬಂದು ಮಡಿವಾಳರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಅಲ್ಲಿನ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯಮಾಡಿಕೊಂಡು ಅರಸನನ್ನು ಕೂಗಿ ಕರೆದರು.


ಆಗ ಯೆಹೋವನು ಯೆಹೋಶುವನಿಗೆ - ನೀನು ಅವರಿಗೆ ಹೆದರಬೇಡ; ನಾಳೆ ಇಷ್ಟೇ ಹೊತ್ತಿಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು; ಅವರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಡಬೇಕು ಅಂದನು.


ಐಗುಪ್ತದಲ್ಲಿ ಪ್ರಕಟಿಸಿರಿ, ವಿುಗ್ದೋಲ್, ತಹಪನೇಸ್, ನೋಫ್ ಎಂಬೀ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ - [ಐಗುಪ್ತವೇ,] ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ ಎಂದು ಸಾರಿರಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ವ್ಯರ್ಥವಾದದ್ದನ್ನು ನುಡಿದು ಸುಳ್ಳಾದದ್ದನ್ನು ಕಂಡದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.


ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಿಬಿಡುವೆನು.


ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಹಿಸುಕುತ್ತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಹಕ್ಕೆಗಳನ್ನು ಕೊಂದ ಮೃಗಗಳಿಂದಲೂ ತುಂಬಿಸಿತು.


ಇದ್ದಲ್ಲಿಯೇ ಬೆಂಕಿಯು ನಿನ್ನನ್ನು ನುಂಗುವದು, ಕತ್ತಿಯು ನಿನ್ನನ್ನು ಕಡಿದುಬಿಡುವದು, ವಿುಡತೆಗಳೋಪಾದಿಯಲ್ಲಿ ನುಂಗಲ್ಪಡುವಿ; ನಿನ್ನ ಜನಸಂಖ್ಯೆಯು ವಿುಡತೆಗಳಷ್ಟು ಅಸಂಖ್ಯಾತವಾಗಲಿ. ಗುಂಪುವಿುಡತೆಗಳಷ್ಟು ಅಪರಿವಿುತವಾಗಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು