Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:4 - ಕನ್ನಡ ಸತ್ಯವೇದವು J.V. (BSI)

4 ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನದಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ವಿುಂಚುಗಳ ಹಾಗೆ ಹಾರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನಗಳಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ಮಿಂಚುಗಳ ಹಾಗೆ ಹಾರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹಾದಿಬೀದಿಗಳಲಿ ಓಡಾಡುತ್ತಿವೆ ರಥಗಳು ರಭಸದಿಂದ ನಗರ ಚೌಕಗಳಲ್ಲಿ ಅವು ಅಡ್ಡಾಡುತ್ತವೆ ವೇಗದಿಂದ ಅವು ಬೆಳಗುತ್ತಿವೆ ಪಂಜುಗಳಂತೆ, ಹೊಳೆಯುತ್ತಿವೆ ಮಿಂಚಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಸ್ತೆಯ ಮೇಲೆ ರಥಗಳು ರಭಸದಿಂದ ಓಡುತ್ತಿವೆ. ನಗರದ ಚೌಕಕ್ಕೆ ಹಿಂದೆ ಮುಂದೆ ಓಡುತ್ತಿವೆ. ಅವು ಉರಿಯುವ ಪಂಜಿನೋಪಾದಿಯಲ್ಲಿವೆ, ಒಂದೆಡೆಯಿಂದ ಇನ್ನೊಂದೆಡೆಗೆ ಹಾರುವ ಮಿಂಚಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ರಥಗಳು ಬೀದಿಗಳಲ್ಲಿ ಬಿರುಗಾಳಿಯಂತೆ ಓಡಾಡುತ್ತವೆ, ಅವು ಚೌಕಗಳಲ್ಲಿ ವೇಗವಾಗಿ ಹಿಂದಕ್ಕೆ ಮತ್ತು ಮುಂದಕ್ಕೆ ನುಗ್ಗುತ್ತವೆ. ಅವು ಉರಿಯುವ ಪಂಜುಗಳಂತೆ ಕಾಣುತ್ತವೆ; ಅವರು ಮಿಂಚಿನಂತೆ ಸುತ್ತಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:4
10 ತಿಳಿವುಗಳ ಹೋಲಿಕೆ  

ಇಗೋ, [ಆ ಶತ್ರುವು] ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವನ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ!


ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ದೂಳು ನಿನ್ನನ್ನು ಮುಸುಕುವದು; ಒಡಕುಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಲುಗಳೊಳಗೆ ನುಗ್ಗುವಾಗ ರಾಹುತ, ಚಕ್ಕಡಿಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿಜ್ವಾಲೆಯಿಂದ ಖಂಡಿಸುವನು.


ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳಲು ಅವನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿ ದಕ್ಷಿಣರಾಜನ ಮೇಲೆ ರಭಸವಾಗಿ ಬಿದ್ದು ನಾಡುನಾಡುಗಳಲ್ಲಿ ನುಗ್ಗಿ ತುಂಬಿತುಳುಕಿ ಹರಡಿಕೊಳ್ಳುವನು.


ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ - ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ;


ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದರಿಯಲಿ!


ಅವರು ಆಯುಧ, ರಥ, ಚಕ್ಕಡಿಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಳನ್ನು ಧರಿಸಿ ನಿನಗೆ ವಿರುದ್ಧವಾಗಿ ಸುತ್ತುಮುತ್ತಲು ವ್ಯೂಹಕಟ್ಟುವರು; ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಒಪ್ಪಿಸಲು ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸಿ ನಿನ್ನನ್ನು ದಂಡಿಸುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವ, ರಥ, ರಾಹುತ, ಬಹುಜನಪರಿವಾರ ಇವುಗಳಿಂದ ಕೂಡಿದವನನ್ನಾಗಿ ನಾನು ಬಡಗಲಿಂದ ತೂರಿನ ಮೇಲೆ ಬರಮಾಡುವೆನು.


ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವದರಿಂದ ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು