Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:5 - ಕನ್ನಡ ಸತ್ಯವೇದವು J.V. (BSI)

5 [ಪಟ್ಟಣದ] ಅರಸನು ತನ್ನ ಸರದಾರರನ್ನು ಸ್ಮರಿಸುತ್ತಾನೆ; ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆಗೆ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಾಜರಾಗಲು ಕರೆಬಂದಿದೆ ಅರಸನಿಂದ ಸೇನಾಪತಿಗಳಿಗೆ; ಎದ್ದುಬಿದ್ದು ಓಡಾಡುತ್ತಿರೆ ಅವರು ಪೌಳಿಗೋಡೆ ಕಡೆಗೆ ಅಡ್ಡ ಗುರಾಣಿಗಳನ್ನೊಡ್ಡುತ್ತಿರೆ ಟಗರು ದಿಮ್ಮಿಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವೈರಿಗಳು ತಮ್ಮ ಶೂರ ಯೋಧರನ್ನು ಕರೆಯುತ್ತಿದ್ದಾರೆ. ಅವರು ಮುನ್ನುಗ್ಗುವಾಗ ಎಡವಿಬೀಳುವರು, ಗೋಡೆಗಳ ಕಡೆಗೆ ನುಗ್ಗಿ ತಮ್ಮ ಗುರಾಣಿಗಳನ್ನು ಇಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನೆವೆಯು ತನ್ನ ಸೇನಾಪತಿಗಳನ್ನು ಕರೆಕಳುಹಿಸಿದ್ದಾನೆ. ಅವರು ತಮ್ಮ ನಡೆಯಲ್ಲಿ ಎಡವುವರು. ಅವರು ಸುಣ್ಣದ ಗೋಡೆಯ ಬಳಿಗೆ ತ್ವರೆಯಾಗಿ ಬರುವರು. ರಕ್ಷಣಾತ್ಮಕ ಗುರಾಣಿಯನ್ನು ಸಿದ್ಧ ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:5
9 ತಿಳಿವುಗಳ ಹೋಲಿಕೆ  

ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.


ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘನಿದ್ರೆಮಾಡುತ್ತಿದ್ದಾರೆ; ನಿನ್ನ ಮಹನೀಯರು ಒರಗಿಹೋಗಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸತಕ್ಕವರು ಯಾರೂ ಇಲ್ಲ.


ರಾಹುತರ ರಭಸ, ಥಳಥಳಿಸುವ ಕತ್ತಿ, ವಿುಂಚುವ ಈಟಿ, ಅಸಂಖ್ಯಾತ ಹತರು, ಶವಗಳ ಮಹಾರಾಶಿ! ಸತ್ತವರು ಲೆಕ್ಕವೇ ಇಲ್ಲ, [ನುಗ್ಗುವವರು] ಅವರ ಹೆಣಗಳನ್ನು ಎಡವುತ್ತಾರೆ.


ಬಿಲ್ಲನ್ನು ಬೊಗ್ಗಿಸಿ ಬಾಣಬಿಡುವವರನ್ನೆಲ್ಲಾ ಬಾಬೆಲಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲ್ಯರ ಸದಮಲಸ್ವಾವಿುಯಾದ ಯೆಹೋವನನ್ನು ಅಸಡ್ಡೆಮಾಡಿತಲ್ಲಾ.


ಔತಣಕ್ಕೆ ಸಿದ್ಧಪಡಿಸಿಕೊಂಡು ಚಾಪೆಗಳನ್ನು ಹಾಸಿಕೊಂಡು ಉಂಡು ಕುಡಿಯುತ್ತಿದ್ದಾರಲ್ಲಾ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ!


ಅವರಲ್ಲಿ ಯಾರೂ ಬಳಲಿ ಮುಗ್ಗರಿಸರು, ಯಾರೂ ತೂಕಡಿಸಿ ನಿದ್ರಿಸರು; ಅವರ ನಡುಕಟ್ಟು ಬಿಚ್ಚಿಲ್ಲ, ಅವರ ಕೆರದ ಬಾರು ಕಿತ್ತಿಲ್ಲ;


ನದೀದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯು ಕರಗಿಹೋಗುತ್ತದೆ.


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅವರ ಸವಾರರು ಕುದುರೆಗಳನ್ನು ಕುಣಿದಾಡಿಸುವರು; ದೂರದಿಂದ ಹತ್ತಿಕೊಂಡು ಬರುವರು; ಕೊಳ್ಳೆಗೆ ಆತುರಪಡುವ ಹದ್ದಿನಂತೆ ಹಾರಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು