ನಹೂಮ 3:10 - ಕನ್ನಡ ಸತ್ಯವೇದವು J.V. (BSI)10 ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿಬಿಟ್ಟರು; ಅದರ ಘನವಂತರಿಗೋಸ್ಕರ ಚೀಟುಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೀಟುಹಾಕಿದರು. ಅವರು ತೆಬೆಸಿನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದರೆ ಅವಳು ಸೆರೆಯಾಗಿ ದೇಶಾಂತರಕ್ಕೆ ಹೋದಳು. ಅವಳ ಕೂಸುಗಳು ಸಹ ಎಲ್ಲಾ ಬೀದಿಗಳ ಮುಖ್ಯ ಸ್ಥಳಗಳಲ್ಲಿ ಅಪ್ಪಳಿಸಲಾಯಿತು. ಅವಳ ಪ್ರಧಾನರಿಗೋಸ್ಕರ ಚೀಟುಹಾಕಿದರು. ಅವಳ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಕಟ್ಟಿದರು. ಅಧ್ಯಾಯವನ್ನು ನೋಡಿ |