Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:14 - ಕನ್ನಡ ಸತ್ಯವೇದವು J.V. (BSI)

14 ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಬುರುಜುಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಯನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಕೋಟೆಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಮಣ್ಣನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿ ಶೇಖರಿಸಿಡು. ನಿನ್ನ ಕೋಟೆಯನ್ನು ಭದ್ರಪಡಿಸು. ಮಣ್ಣಿಗೆ ಇಳಿ; ಜೇಡಿಯನ್ನು ತುಳಿ; ಇಟ್ಟಿಗೆಯ ಅಚ್ಚನ್ನು ಹಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀರನ್ನು ತಂದು ಪಟ್ಟಣದೊಳಗೆ ಶೇಖರಿಸಿಡು. ಯಾಕೆಂದರೆ ವೈರಿ ಸೈನ್ಯವು ನಿನ್ನ ನಗರವನ್ನು ಮುತ್ತುವವು. ನಗರದೊಳಗೆ ಅನ್ನ ನೀರನ್ನು ಯಾರಿಗೂ ತರಲು ಬಿಡುವುದಿಲ್ಲ. ನಿನ್ನ ಬುರುಜುಗಳನ್ನು ಬಲಪಡಿಸಿಕೊ. ಹೆಚ್ಚು ಇಟ್ಟಿಗೆಗಳನ್ನು ಮಾಡುವಂತೆ ಆವೆಮಣ್ಣನ್ನು ಶೇಖರಿಸು. ಗಾರೆಯನ್ನು ಕಲಸಿಕೊ. ಇಟ್ಟಿಗೆಗಳನ್ನು ಮಾಡುವ ಅಚ್ಚನ್ನು ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮುತ್ತಿಗೆಗೋಸ್ಕರ ನೀರನ್ನು ಸೇದು; ನಿನ್ನ ಬಲವಾದ ಕೋಟೆಗಳನ್ನು ಭದ್ರಮಾಡು; ಕೆಸರಿನಲ್ಲಿ ಸೇರು; ಮಣ್ಣನ್ನು ತುಳಿ; ಇಟ್ಟಿಗೆ ಅಚ್ಚನ್ನು ಹಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:14
10 ತಿಳಿವುಗಳ ಹೋಲಿಕೆ  

[ನಿನೆವೆಯೇ,] ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ಕಾಯಿ, ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.


ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದರಿಯಲಿ!


[ಪರದೇಶಗಳಲ್ಲಿ] ಅಗೆದು ನೀರು ತೆಗೆದು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಕೊಚ್ಚಿಕೊಂಡಿದ್ದೀ.


ಜನಾಂಗಗಳೇ, ಭಂಗಪಡಿಸಿರಿ, ನೀವೂ ಭಂಗಪಡುವಿರಿ; ದೂರದೇಶೀಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.


ಹಿಜ್ಕೀಯನು - ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವದಕ್ಕೆ ಪ್ರಯತ್ನಿಸುತ್ತಿರುವದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವದಕ್ಕೇ ಅಲ್ಲವೋ?


(ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯವನ್ನು ಸಹ ಪುನರುಜ್ಜೀವನ ಮಾಡುವನು; ಸೂರೆಗಾರರು ಅವುಗಳನ್ನು ಸೂರೆಗೈದು ಅವುಗಳ ಶಾಖೆಗಳನ್ನು ಹಾಳುಮಾಡಿದ್ದರಷ್ಟೆ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು