Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:17 - ಕನ್ನಡ ಸತ್ಯವೇದವು J.V. (BSI)

17 ನಿನ್ನ ಪ್ರಭುಗಳು ವಿುಡತೆಗಳಂತಿದ್ದಾರೆ, ವಿುಡತೆಯ ದಂಡು ಶೀತದಿನದಲ್ಲಿ ಬೇಲಿಗಳೊಳಗೆ ಇಳಿದಿದ್ದು ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿನ್ನ ಪ್ರಭುಗಳು ಮಿಡತೆಯಂತಿದ್ದಾರೆ, ಮಿಡತೆಯ ದಂಡು ಚಳಿಗಾಲದಲ್ಲಿ ಬೇಲಿಗಳೊಳಗೆ ಇಳಿದಿದ್ದು, ಹೊತ್ತು ಹುಟ್ಟಿದಾಗ ಓಡಿಹೋಗಿ ಯಾರಿಗೂ ಗೊತ್ತಾಗದ ಸ್ಥಳದಲ್ಲಿ ಅಡಗುವ ಪ್ರಕಾರ ನಿನ್ನ ಸೇನಾಪತಿಗಳು ಮಾಯವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಪಹರೆಯವರು ಮಿಡತೆಗಳಂತೆ, ನಿನ್ನ ಸೇನಾಧಿಪತಿಗಳು ಗುಂಪು ಮಿಡತೆಗಳಂತೆ ಇದ್ದಾರೆ. ಚಳಿಗಾಲದಲ್ಲಿ ಅವು ಬೇಲಿಯ ಮರೆಯಲ್ಲಿರುತ್ತವೆ. ಹೊತ್ತು ಹುಟ್ಟಿದಾಗ ಯಾರಿಗೂ ತಿಳಿಯದ ಸ್ಥಳಕ್ಕೆ ಹಾರಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಸರಕಾರದ ಅಧಿಕಾರಿಗಳು ಸಹ ಮಿಡತೆಗಳಂತಿದ್ದಾರೆ. ಅವರು ಚಳಿಯ ದಿವಸದಲ್ಲಿ ಕಲ್ಲಿನ ಗೋಡೆಯ ಮೇಲೆ ಬಂದು ಕುಳಿತುಕೊಳ್ಳುವ ಮಿಡತೆಯಂತಿದ್ದಾರೆ. ಆದರೆ ಸೂರ್ಯನು ಮೇಲೆ ಬಂದಾಗ ಬಿಸಿಲು ಏರಿ ಕಲ್ಲು ಬಿಸಿಯಾದಾಗ ಆ ಮಿಡತೆಗಳೆಲ್ಲಾ ಹಾರಿಹೋಗುವವು. ಅವು ಎಲ್ಲಿಗೆ ಹೋದವು ಎಂದು ಯಾರಿಗೂ ಗೊತ್ತಿಲ್ಲ. ನಿನ್ನ ಅಧಿಕಾರಿಗಳೂ ಅದೇ ರೀತಿಯಲ್ಲಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ಕಾವಲುಗಾರರು ಮಿಡತೆಗಳ ಹಾಗೆಯೂ, ನಿನ್ನ ಅಧಿಪತಿಗಳು ತಂಪಾದ ದಿವಸದಲ್ಲಿ ಬೇಲಿಗಳೊಳಗೆ ಇಳಿದುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ. ಸೂರ್ಯೋದಯವಾಗುವಾಗ ಹಾರಿ ಹೋಗುತ್ತವೆ. ಆಗ ಅವು ಎಲ್ಲಿದ್ದಾವೆಂದು ಅವುಗಳ ಸ್ಥಳವು ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:17
4 ತಿಳಿವುಗಳ ಹೋಲಿಕೆ  

ಆ ವಿುಡಿತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು; ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಏನೋ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು.


ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.


ಅತಿಭಯಂಕರ ಜನಾಂಗದವರಾದ ಮ್ಲೇಚ್ಫರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲಿಯೂ ಎಲ್ಲಾ ಹಳ್ಳಕೊಳ್ಳಗಳಲ್ಲಿಯೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲಾ ತೊರೆಗಳ ಹತ್ತಿರ ಮುರಿದುಹಾಕಲ್ಪಟ್ಟಿವೆ; ಲೋಕದ ಸಮಸ್ತಜನಾಂಗಗಳು ಅದರ ನೆರಳಿನಿಂದ ತೊಲಗಿ ಅದನ್ನು ಬಿಟ್ಟುಹೋಗಿವೆ.


ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧ ಶ್ರೇಷ್ಠವಸ್ತುಗಳ ನಿಧಿಗೂ ಪಾರವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು