ನಹೂಮ 3:19 - ಕನ್ನಡ ಸತ್ಯವೇದವು J.V. (BSI)19 ನಿನ್ನ ಗಾಯವು ಗುಣಹೊಂದದು, ನಿನ್ನ ಪೆಟ್ಟು ಗಡಸು; ನಿನ್ನ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆಹಾಕುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಎಲ್ಲಿದ್ದಾರೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವೆ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಿನ್ನ ಗಾಯಕ್ಕೆ ಮದ್ದಿಲ್ಲ, ನಿನ್ನ ಗಾಯ ಪ್ರಾಣನಾಶಕ. ನಿನ್ನ ಸುದ್ದಿಯನ್ನು ಕೇಳುವವರೆಲ್ಲರೂ ನಿನ್ನ ಪತನಕ್ಕಾಗಿ ಕೈ ತಟ್ಟುವರು. ಏಕೆಂದರೆ ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರಿದ್ದಾರೆ? ಅಧ್ಯಾಯವನ್ನು ನೋಡಿ |