ನೆಹೆಮೀಯ 10:29 - ಕನ್ನಡ ಸತ್ಯವೇದವು J.V. (BSI)29 ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯುವದಾಗಿ ಆಣೆಯಿಟ್ಟು ಪ್ರಮಾಣಮಾಡಿದರು. ಹೇಗಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು; ಅಧ್ಯಾಯವನ್ನು ನೋಡಿ |