Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:30 - ಕನ್ನಡ ಸತ್ಯವೇದವು J.V. (BSI)

30 ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವದಿಲ್ಲ. ನಮ್ಮ ಮಕ್ಕಳಿಗೋಸ್ಕರ ಅವರಿಂದ ಹೆಣ್ಣು ತೆಗೆದುಕೊಳ್ಳುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಈ ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ ಮತ್ತು ನಮ್ಮ ಗಂಡು ಮಕ್ಕಳಿಗೋಸ್ಕರ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ‘ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ; ನಮ್ಮ ಮಕ್ಕಳಿಗೆ ಅವರಿಂದ ಹೆಣ್ಣು ತೆಗೆದುಕೊಳ್ಳುವುದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನಮ್ಮ ಗಂಡು ಮತ್ತು ಹೆಣ್ಣುಮಕ್ಕಳು ನಮ್ಮ ಸುತ್ತಲಿರುವ ಅನ್ಯರನ್ನು ಮದುವೆಯಾಗಲು ಬಿಡುವುದಿಲ್ಲ” ಎಂದು ಪ್ರತಿಜ್ಞೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾವು ನಮ್ಮ ಪುತ್ರಿಯರನ್ನು ಇತರ ಜನರಿಗೆ ಕೊಡುವುದಿಲ್ಲ, ನಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳುವುದಿಲ್ಲ ಎಂದು ಆಣೆ ಮಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:30
15 ತಿಳಿವುಗಳ ಹೋಲಿಕೆ  

ಅವರೊಡನೆ ಬೀಗತನಮಾಡಬಾರದು; ಅವರ ಮಕ್ಕಳಿಗೆ ಹೆಣ್ಣುಗಳನ್ನು ಕೊಡಲೂಬಾರದು. ಅವರಿಂದ ತರಲೂಬಾರದು.


ಅದಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಕನ್ನಿಕೆಗಳನ್ನು ತೆಗೆದುಕೊಳ್ಳುವದಕ್ಕೆ ಆಸ್ಪದವುಂಟಾಗುವದು; ತರುವಾಯ ಆ ಸೊಸೆಯರು ತೌರಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.


ಅದೇ ಕಾಲದಲ್ಲಿ ನಾನು ಅಷ್ಡೋದ್ ಅಮ್ಮೋನಿಯ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಮಾಡಿ


ಕೋಪಗೊಂಡು ಅವರನ್ನು ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು -


ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ


ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,


ಕಂಬದ ಬಳಿಯಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣಮಾಡಿದರು.


ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.


ತನ್ನ ಸ್ಥಳದಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣ ಮಾಡಿದನು.


ಅವರು - ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವದಿಲ್ಲ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರಿಸಿ ಈ ಮಾತಿನಂತೆ ನಡೆಯುವದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.


ಸಹಿಮಾಡಿದವರು - ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿಯೂ


ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ; ಅದನ್ನು ನೆರವೇರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು