Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:35 - ಕನ್ನಡ ಸತ್ಯವೇದವು J.V. (BSI)

35 ನಮ್ಮ ಭೂವಿುಯ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿವರುಷವೂ ಯೆಹೋವನ ಆಲಯಕ್ಕೆ ತಂದುಕೊಡುವೆವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ನಮ್ಮ ಭೂಮಿಯ ಮತ್ತು ಎಲ್ಲ ಹಣ್ಣಿನಮರಗಳ ಪ್ರಥಮ ಫಲವನ್ನು ಪ್ರತೀ ವರ್ಷವೂ ಸರ್ವೇಶ್ವರನ ಆಲಯಕ್ಕೆ ತಂದುಕೊಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 “ನಮ್ಮ ಬೆಳೆಗಳಲ್ಲಿ ಮತ್ತು ಹಣ್ಣಿನ ಮರಗಳಲ್ಲಿ ಬೆಳೆದ ಪ್ರಥಮ ಫಲಗಳನ್ನೆಲ್ಲಾ ಪ್ರತಿವರ್ಷ ದೇವಾಲಯಕ್ಕೆ ತಂದು ಅರ್ಪಿಸುವುದಕ್ಕೆ ಒಪ್ಪಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಯೆಹೋವ ದೇವರ ಆಲಯಕ್ಕೆ ಪ್ರತಿ ವರ್ಷದಲ್ಲಿಯೂ ನಮ್ಮ ಭೂಮಿಯ ಫಲಗಳಿಂದ ಪ್ರಥಮ ಫಲಗಳನ್ನು ತರುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:35
13 ತಿಳಿವುಗಳ ಹೋಲಿಕೆ  

ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿಯೂ ನೀವು ಕೆಲವು ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಿ


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಉತ್ಕೃಷ್ಟವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಇಸ್ರಾಯೇಲ್ಯರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಆಗಬೇಕೆಂದು ವಿಧಿಸಿದ್ದೇನೆ.


ಭೂವಿುಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.


ನಿನ್ನ ಕುಲದ ಮೂಲಪುರುಷನಾದ ಲೇವಿಯ ವಂಶದವರನ್ನು ನೀನು ಹತ್ತಿರಕ್ಕೆ ಕರೆದು ಜೊತೆಯಲ್ಲಿರಿಸಿಕೊಂಡು ನಿನ್ನ ಕೈಕೆಳಗೆ ಸೇವೆ ಮಾಡಿಸಬೇಕು; ಆದರೆ ಆಜ್ಞಾಶಾಸನಗಳಿರುವ ಗುಡಾರದ ಮುಂದೆ ನೀನೂ ನಿನ್ನ ಮಕ್ಕಳೂ ಮಾತ್ರ ಸೇವೆಮಾಡಬೇಕು.


ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ಬೇರೆ ಯಾವದರ ವಿಷಯದಲ್ಲಿ ಅವನು ಸುಳ್ಳಾಣೆಯಿಟ್ಟನೋ ಅದನ್ನೂ ಪೂರ್ತಿಯಾಗಿ ತಂದುಕೊಡಬೇಕಲ್ಲದೆ ಐದನೆಯ ಒಂದು ಪಾಲನ್ನು ಹೆಚ್ಚಾಗಿ ಕೊಡಬೇಕು. ಅವನು ಪ್ರಾಯಶ್ಚಿತ್ತಯಜ್ಞವನ್ನು ಮಾಡುವ ದಿನದಲ್ಲೇ ಅದನ್ನು ಅದರ ನ್ಯಾಯವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು.


ಮತ್ತು ಅವನು ಪ್ರಾಯಶ್ಚಿತ್ತಕ್ಕಾಗಿ ನಿನಗೆ ಸರಿಯೆಂದು ತೋರುವ ಪೂರ್ಣಾಂಗವಾದ ಟಗರನ್ನು ಹಿಂಡಿನಿಂದ ತಂದು ಯಾಜಕನಿಗೆ ಒಪ್ಪಿಸಬೇಕು.


ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು