Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:22 - ಕನ್ನಡ ಸತ್ಯವೇದವು J.V. (BSI)

22 ದೇವಾಲಯ ಸೇವಾ ಸಂಬಂಧದಲ್ಲಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯ ಮಗನೂ ಹಷಬ್ಯನ ಮೊಮ್ಮಗನೂ ಮತ್ತನ್ಯನ ಮರಿಮಗನೂ ಮೀಕನ ವಂಶದವನೂ ಆದ ಉಜ್ಜೀಯು ಯೆರೂಸಲೇವಿುನಲ್ಲಿದ್ದ ಲೇವಿಯರ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವಾಲಯದ ಕೆಲಸದ ಸಂಬಂಧವಾಗಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯನ ಮಗನೂ, ಹಷಬ್ಯನ ಮೊಮ್ಮಗನೂ, ಮತ್ತನ್ಯನ ಮರಿಮಗನೂ, ಮೀಕನ ವಂಶದವನಾದ ಆದ ಉಜ್ಜೀಯು ಯೆರೂಸಲೇಮಿನಲ್ಲಿದ್ದ ಲೇವಿಯರ ನಾಯಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವಾಲಯ ಸೇವಾಸಂಬಂಧದಲ್ಲಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯ ಮಗನೂ ಹಷಬ್ಯನ ಮೊಮ್ಮಗನೂ ಮತ್ತನ್ಯನ ಮರಿಮಗನೂ ಮೀಕನ ವಂಶದವನೂ ಆದ ಉಜ್ಜೀಯು ಜೆರುಸಲೇಮಿನಲ್ಲಿದ್ದ ಲೇವಿಯರ ನಾಯಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೀಕ ವಂಶಕ್ಕೆ ಸೇರಿದ ಉಜ್ಜೀಯು ಜೆರುಸಲೇಮಿನಲ್ಲಿ ಲೇವಿಯರಿಗೆಲ್ಲಾ ಮುಖ್ಯಸ್ಥನಾಗಿದ್ದನು. ಉಜ್ಜೀಯು ಬಾನೀಯ ಮಗ. (ಬಾನೀಯು ಹಷಬ್ಯನ ಮಗ; ಹಷಬ್ಯನು ಮತ್ತನ್ಯನ ಮಗ; ಮತ್ತನ್ಯನು ಮೀಕನ ಮಗ.) ಉಜ್ಜೀಯು ಆಸಾಫನ ಸಂತಾನಕ್ಕೆ ಸೇರಿದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮೀಕನ ಮಗ, ಮತ್ತನ್ಯನ ಮಗ, ಹಷಬ್ಯನ ಮಗ, ಬಾನೀಯ ಮಗ ಉಜ್ಜೀಯು ಯೆರೂಸಲೇಮಿನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. ಆಸಾಫನ ವಂಶದಲ್ಲಿರುವ ಹಾಡುಗಾರನಾದ ಉಜ್ಜೀಯನು ದೇವರ ಆಲಯ ಕಾರ್ಯದ ಮೇಲೆ ಅಧಿಕಾರಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:22
19 ತಿಳಿವುಗಳ ಹೋಲಿಕೆ  

ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತಿರಲು ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನು.


ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ ಆದ ಜೆಕರ್ಯನೂ


ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕನು.


ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು.


ಜಿಕ್ರಿಯ ಮಗನಾದ ಯೋವೇಲನು ಇವರ ನಾಯಕನು; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ.


ಹೋದೀಯ, ಬಾನೀ, ಬೆನೀನೂ ಎಂಬವರೂ.


ಹೋದೀಯ, ಕೆಲೀಟ, ಪೆಲಾಯ, ಹಾನಾನ್, ಮೀಕ,


ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.


ಇವನ ಆಚೆ ಜೀರ್ಣೋದ್ಧಾರಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.


ಅವನೊಡನೆ ಯೆಶಾಯನನ್ನೂ ಅವರ ಪುತ್ರಭ್ರಾತೃಗಳಲ್ಲಿ ಇಪ್ಪತ್ತು ಮಂದಿಯನ್ನೂ ದಾವೀದನೂ ಅವನ ಸರದಾರರೂ


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಆಮೇಲೆ ಉಗ್ರಾಣಗಳನ್ನು ನೋಡುವದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಕುಲದವನಾದ ಪೆದಾಯ ಇವರನ್ನೂ ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇವಿುಸಿದೆನು; ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವದು ಇವರ ಕರ್ತವ್ಯ.


ಗಾಯನ ಮಂಡಲಿಗಳೂ ಕೃತಜ್ಞತಾಸ್ತುತಿಕೀರ್ತನೆಗಳ ದೇವಸೇವೆಯೂ ಪೂರ್ವಕಾಲದಲ್ಲಿ ಅಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿ ಇದ್ದವಷ್ಟೆ.


ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು; ಚೀಬನ ಮನೆಯವರೆಲ್ಲರೂ ಅವನ ಸೇವಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು