ನೆಹೆಮೀಯ 12:27 - ಕನ್ನಡ ಸತ್ಯವೇದವು J.V. (BSI)27 ಯೆರೂಸಲೇವಿುನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವದಕ್ಕಾಗಿ ಯೆರೂಸಲೇವಿುಗೆ ಕರೆಯಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆರೂಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು, ಕೀರ್ತನೆ ಗಾಯನಗಳಿಂದಲೂ ತಾಳ, ಸ್ವರಮಂಡಲ ಹಾಗು ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಕರೆಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಜನರು ಜೆರುಸಲೇಮಿನ ಪೌಳಿಗೋಡೆಯನ್ನು ಪ್ರತಿಷ್ಠಿಸಿದರು. ಅವರು ಎಲ್ಲಾ ಲೇವಿಯರನ್ನು ನಗರಕ್ಕೆ ಕರೆತಂದು ಪ್ರತಿಷ್ಠೆ ಮಾಡಿದರು. ಅವರು ದೇವರಿಗೆ ಸ್ತುತಿಪದಗಳನ್ನು, ತಾಳ, ಸ್ವರಮಂಡಲ, ಕಿನ್ನರಿಗಳನ್ನು ಬಾರಿಸುತ್ತಾ ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ, ಹಾಡುವುದರಿಂದಲೂ, ತಾಳಗಳಿಂದಲೂ, ವೀಣೆಗಳಿಂದಲೂ, ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವುದಕ್ಕೆ ಲೇವಿಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು. ಅಧ್ಯಾಯವನ್ನು ನೋಡಿ |
[ಮಂಜೂಷವನ್ನು ಒಳಗಿಟ್ಟ] ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಒಬ್ಬನೋ ಎಂಬಂತೆ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವದಕ್ಕಾಗಿ ತುತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ ತಾಳ ಮೊದಲಾದ ವಾದ್ಯಗಳ ಧ್ವನಿಯೂ ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವದು ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.
ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಯೆಹೋವನ ಗಾಯನಸೇವೆಗೋಸ್ಕರ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿದ್ದವು. ಇವರು ರಾಜ ಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡಿಸುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಮರ್ಪಿಸಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂಬದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಾಯೇಲ್ಯರೆಲ್ಲರೂ ನಿಂತಿದ್ದರು.