Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:30 - ಕನ್ನಡ ಸತ್ಯವೇದವು J.V. (BSI)

30 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಿಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಯಾಜಕರೂ ಲೇವಿಯರೂ ಶಾಸ್ತ್ರೋಕ್ತವಾಗಿ ತಮ್ಮನ್ನು ಶುದ್ಧಪಡಿಸಿಕೊಂಡರು. ಅನಂತರ ಜನರನ್ನೂ ಜೆರುಸಲೇಮಿನ ಗೋಡೆಯನ್ನೂ ಬಾಗಿಲುಗಳನ್ನೂ ಶಾಸ್ತ್ರೋಕ್ತವಾಗಿ ಶುದ್ಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯಾಜಕರೂ, ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ, ಬಾಗಿಲುಗಳನ್ನೂ, ಗೋಡೆಯನ್ನೂ ಶುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:30
14 ತಿಳಿವುಗಳ ಹೋಲಿಕೆ  

ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.


ಸೆರೆಯಿಂದ ಬಂದ ಇಸ್ರಾಯೇಲ್ಯರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕ ಭೋಜನಮಾಡಿದರು.


ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧಪಡಿಸಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.


ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;


ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣಾರ್ಥವಾಗಿ ಯಜ್ಞಗಳನ್ನು ಮಾಡಬೇಕಾದವನಾಗಿದ್ದಾನೆ.


ಪ್ರತಿಯೊಬ್ಬ ಮಹಾಯಾಜಕನು ಮನುಷ್ಯರೊಳಗಿಂದ ಆರಿಸಲ್ಪಟ್ಟವನಾಗಿದ್ದು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ಜರಗಿಸುವದಕ್ಕಾಗಿ ನೇವಿುಸಲ್ಪಡುತ್ತಾನಲ್ಲಾ. ಅವನು ಅವರಿಗೋಸ್ಕರ ಕಾಣಿಕೆಗಳನ್ನೂ ಪಾಪನಿವಾರಣಕ್ಕಾಗಿ ಯಜ್ಞಗಳನ್ನೂ ಸಮರ್ಪಿಸಬೇಕು.


ನಾನು ಈ ಪ್ರಕಾರ ಅನ್ಯವಾದದ್ದನ್ನೆಲ್ಲಾ ತೆಗಿಸಿ ಅವರನ್ನು ಶುದ್ಧಪಡಿಸಿದೆನಲ್ಲದೆ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಪ್ರತಿಯೊಬ್ಬನಿಗಿರುವ ಕೆಲಸದ ವಿಷಯವಾಗಿಯೂ


ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ಚರ್ಮವನ್ನು ಸುಲಿಯುವದು [ಶುದ್ಧಿಪಡಿಸಿಕೊಂಡ] ಕೆಲವು ಮಂದಿ ಯಾಜಕರಿಂದ ಆಗದೆ ಹೋಯಿತು. ಆದದರಿಂದ ವಿುಕ್ಕ ಯಾಜಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸ ತೀರುವ ತನಕ ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು.


ಆಗ ಮೋಶೆ ಜನರಿಗೆ - ಮೂರನೆಯ ದಿನದಲ್ಲಿ ಸಿದ್ಧವಾಗಿರ್ರಿ; ಯಾವ ಪುರುಷನೂ ಸ್ತ್ರೀಸಂಗಮಾಡಬಾರದು ಎಂದು ಹೇಳಿದನು.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.


ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಕೂಡಿ ಬಂದರು.


ಯಾಜಕರೂ ಲೇವಿಯರೂ ಇಸ್ರಾಯೇಲ್ ದೇವರಾದ ಯೆಹೋವನ ಮಂಜೂಷವನ್ನು ತರುವದಕ್ಕೋಸ್ಕರ ತಮ್ಮನ್ನು ಶುದ್ಧಿಪಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು