Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:39 - ಕನ್ನಡ ಸತ್ಯವೇದವು J.V. (BSI)

39 ಅಲ್ಲಿಂದ ಎಫ್ರಾಯೀಮ್ ಬಾಗಲು, ಯೆಷಾನಾ ಬಾಗಲು, ಮೀನು ಬಾಗಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಲಿನವರೆಗೂ ಹೋಗಿ ಸೆರೆಮನೆಯ ಬಾಗಲಿನ ಬಳಿಯಲ್ಲಿ ನಿಂತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅಲ್ಲಿಂದ ಎಫ್ರಾಯೀಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಗೋಪುರ, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿ ಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆಮೇಲೆ ಅವರು ಎಫ್ರಾಯಿಮನ ದ್ವಾರ, ಹಳೇ ದ್ವಾರ ಮತ್ತು “ಮೀನು” ಎಂಬ ದ್ವಾರ ಇವುಗಳ ಮೇಲೆ ಹಾದುಹೋದರು. ಅವರು ಹನನೇಲ್ ಬುರುಜು ಮತ್ತು “ನೂರು” ಎಂಬ ಬುರುಜುಗಳ ಮೇಲೆ ಹಾದುಹೋಗಿ “ಕುರಿ” ಎಂಬ ದ್ವಾರದವರೆಗೂ ಹೋದರು. ಅವರು “ಕಾವಲು ದ್ವಾರ”ದ ಬಳಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಎಫ್ರಾಯೀಮ್ ಬಾಗಿಲ ಮೇಲೆಯೂ, ಯೆಷಾನಾ ಬಾಗಿಲ ಮೇಲೆಯೂ, ಮೀನು ಬಾಗಿಲ ಮೇಲೆಯೂ ಹಾದು, ಹನನೇಲ್ ಗೋಪುರವನ್ನೂ, ಶತ ಗೋಪುರವನ್ನೂ ದಾಟಿ, ಕುರಿ ಬಾಗಿಲವರೆಗೆ ಬಂದು ಸೆರೆಮನೆಯ ಬಾಗಿಲ ಬಳಿಯಲ್ಲಿ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:39
12 ತಿಳಿವುಗಳ ಹೋಲಿಕೆ  

ಆಗ ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.


ಈ ಆಜ್ಞಾನುಸಾರವಾಗಿ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ ದೇವಾಲಯದ ಪ್ರಾಕಾರಗಳಲ್ಲಿಯೂ ನೀರು ಬಾಗಲು, ಎಫ್ರಾಯೀಮ್ ಬಾಗಲು ಇವುಗಳ ಮುಂದಣ ಬೈಲುಗಳಲ್ಲಿಯೂ ಪರ್ಣಶಾಲೆಗಳನ್ನು ಮಾಡಿಕೊಂಡರು.


ಹಳೆಯದು ಎಂಬ ಬಾಗಲನ್ನು ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು.


ಮೀನುಬಾಗಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು.


ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿಬರುವ ಮೂಲೆಬುರುಜಿನ ಎದುರಿನ ಭಾಗವನ್ನು ಊಜೈಯ ಮಗನಾದ ಪಾಲಾಲನೂ ಇವನ ಆಚೆಯಲ್ಲಿ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.


ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡುಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು.


ಯೆರೂಸಲೇವಿುನಲ್ಲಿ ಕುರೀ ಅಗಸೇಬಾಗಲಿನ ಹತ್ತಿರದಲ್ಲಿ ಒಂದು ಕೊಳವಿದೆ; ಇದಕ್ಕೆ ಇಬ್ರಿಯ ಮಾತಿನಲ್ಲಿ ಬೇತ್ಸಥಾ ಎಂದು ಹೆಸರು.


ಅದೇ ದಿನದಲ್ಲಿ ಮೀನುಬಾಗಿಲಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿಂದ ಧಡಮ್ ಎನ್ನುವ ಶಬ್ದ, ಅಂತು ದೊಡ್ಡ ಗದ್ದಲವಾಗುವದು; ಇದು ಯೆಹೋವನ ನುಡಿ.


ಆ ಕಾಲದಲ್ಲಿ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮನ್ನು ಮುತ್ತಿತ್ತು, ಮತ್ತು ಪ್ರವಾದಿಯಾದ ಯೆರೆಮೀಯನು ಯೆಹೂದದ ರಾಜನ ಮನೆಗೆ ಸೇರಿದ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದನು.


ಯೆಹೋವನು ಇಂತೆನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವದು.


ಎರಡು ಭಜನಮಂಡಲಿಯ ಗುಂಪಿನವರೂ ನಾನೂ ನನ್ನ ಜೊತೆಯಲ್ಲಿದ್ದ ಅರ್ಧಮಂದಿ ಅಧಿಕಾರಿಗಳೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು