Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:1 - ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರಪಾರಾಯಣವು ನಡೆಯುತ್ತಿರಲಾಗಿ ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ದಿವಸ ಎಲ್ಲಾ ಜನರಿಗೆ ಕೇಳಿಸುವಂತೆ ಮೋಶೆಯ ಗ್ರಂಥಗಳನ್ನು ಓದಲಾಯಿತು. ಅದರಲ್ಲಿ ಈ ಆಜ್ಞೆಯು ಬರೆಯಲ್ಪಟ್ಟಿದ್ದನ್ನು ಕಂಡುಕೊಂಡರು. ಅದೇನೆಂದರೆ: ದೇವರ ಸಭೆಯಲ್ಲಿ ಯಾವ ಅಮ್ಮೋನ್ಯನಾಗಲಿ ಮೋವಾಬ್ಯನಾಗಲಿ ಇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:1
22 ತಿಳಿವುಗಳ ಹೋಲಿಕೆ  

ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು ತಮ್ಮ ದೇವರಾದ ಯೆಹೋವನ ಧರ್ಮಶಾಸ್ತ್ರ ಗ್ರಂಥವನ್ನು ಪಾರಾಯಣ ಮಾಡಿಸಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.


ಅದೇ ಕಾಲದಲ್ಲಿ ನಾನು ಅಷ್ಡೋದ್ ಅಮ್ಮೋನಿಯ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಮಾಡಿ


ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರು ಪ್ರವಾದಿಗಳು ಇವರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು; ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ


ಯಾಕಂದರೆ ಪುರಾತನಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವವರು ಇದ್ದಾರೆ; ಅದು ಪ್ರತಿ ಸಬ್ಬತ್‍ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.


ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.


ಆತನು ಅವನಿಗೆ - ಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ? ಎಂದು ಹೇಳಿದನು.


ಯೆಹೋವನು ಇಂತೆನ್ನುತ್ತಾನೆ - ಅಮ್ಮೋನ್ಯರು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅವರಿಗಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರಷ್ಟೆ.


ಮೋವಾಬನ್ನು ಕುರಿತದ್ದು. ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ನೆಬೋಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗಹೊಂದಿದೆ, ವಿುಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ.


ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಯಾವದೂ ಇಲ್ಲದಿರದು, ಎಲ್ಲವೂ ಜೊತೆಜೊತೆಯಾಗಿರುವವು; ಆತನ ಬಾಯಿಂದ ಅಪ್ಪಣೆಯಾಯಿತಲ್ಲವೆ, ಆತನ ಆತ್ಮವು ಇವುಗಳನ್ನು ಒಟ್ಟಿಗೆ ಬರಮಾಡಿತಷ್ಟೆ.


ಅವನ ಬಳಿಯಲ್ಲಿ ನಿಂತಿದ್ದ ಅಮ್ಮೋನಿಯನಾದ ಟೋಬೀಯನು - ಅವರು ಕಟ್ಟುವ ಕಲ್ಲುಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವದು ಅಂದನು.


ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ - ನೀವು ಇಲ್ಲಿ ಮಾಡುವದೇನು? ಅರಸನಿಗೆ ವಿರೋಧವಾಗಿ ತಿರುಗಿಬೀಳಬೇಕೆಂದಿರುತ್ತೀರೋ ಎಂದು ಕೇಳಿದರು.


ಇಸ್ರಾಯೇಲ್ಯರ ಹಿತಚಿಂತಕನೊಬ್ಬನು ಬಂದನೆಂಬ ವರ್ತಮಾನವು ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್‍ದೇಶದವನಾದ ಟೋಬೀಯ ಎಂಬ ದಾಸನಿಗೂ ಮುಟ್ಟಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.


ಅವನು ಬೆಯೋರನ ಮಗನಾದ ಬಿಳಾಮನನ್ನು ಕರಿಸುವದಕ್ಕೆ ಸ್ವಜನರ ದೇಶಕ್ಕೆ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ ಅವನಿಗೆ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡು ನನಗೆದುರಾಗಿ ಇಳಿದಿದ್ದಾರೆ; ಅವರು ನಮಗಿಂತ ಬಲಿಷ್ಠರು.


ಯಾಜಕನಾದ ಎಜ್ರನು ಗ್ರಹಿಸಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು