Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:11 - ಕನ್ನಡ ಸತ್ಯವೇದವು J.V. (BSI)

11 ಇದರ ದೆಸೆಯಿಂದ ನಾನು ಅಧಿಕಾರಿಗಳೊಡನೆ - ದೇವಾಲಯವನ್ನು ಅಲಕ್ಷ್ಯಮಾಡಿದ್ದೇಕೆ ಎಂಬದಾಗಿ ವಾದಿಸಿ ಬಿಟ್ಟುಹೋದವರನ್ನು ತಿರಿಗಿ ಕರಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದರ ದೆಸೆಯಿಂದ ನಾನು ಅಧಿಕಾರಿಗಳನ್ನು ಗದರಿಸಿ, “ದೇವಾಲಯವನ್ನು ಅಲಕ್ಷ್ಯ ಮಾಡಿದ್ದೇಕೆ?” ಎಂದು ಕೇಳಿದ್ದಲ್ಲದೆ ಬಿಟ್ಟು ಹೋದವರನ್ನು ಪುನಃ ಕರೆಯಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ಕಾರಣ ನಾನು ಅಧಿಕಾರಿಗಳನ್ನು, “ದೇವಾಲಯವನ್ನು ಅಲಕ್ಷ್ಯಮಾಡಿದ್ದೇಕೆ?", ಎಂಬುದಾಗಿ ಪ್ರಶ್ನಿಸಿದೆ; ಬಿಟ್ಟುಹೋದವರನ್ನು ತಿರುಗಿ ಕರೆಸಿ, ಅವರನ್ನು ಅವರವರ ಉದ್ಯೋಗಗಳಲ್ಲಿರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ನಾನು ಅಧಿಕಾರಿಗಳಿಗೆ, “ನೀವು ದೇವರ ಆಲಯವನ್ನು ನಿರ್ಲಕ್ಷಿಸಿದ್ದೇನು?” ಎಂದು ಪ್ರಶ್ನಿಸಿದೆನು. ಅನಂತರ ನಾನು ಲೇವಿಯರನ್ನು ಒಟ್ಟಾಗಿ ಸೇರಿಸಿ ತಮ್ಮತಮ್ಮ ಸ್ಥಳಗಳಿಗೆ ಹೋಗಿ ತಮಗೆ ನೇಮಕವಾದ ಕರ್ತವ್ಯ ಪಾಲಿಸುವಂತೆ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ನಾನು ಅಧಿಕಾರಿಗಳನ್ನು ಗದರಿಸಿ ಅವರಿಗೆ, “ದೇವರ ಮಂದಿರವನ್ನು ಅಲಕ್ಷ್ಯಮಾಡಿದ್ದೇಕೆ?” ಎಂದು ವಾದಿಸಿದೆನು. ಬಿಟ್ಟುಹೋದವರನ್ನು ತಿರಿಗಿ ಕರೆಯಿಸಿ, ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:11
8 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು ಸೇವೆನಡಿಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ ಪವಿತ್ರಾಲಯದ ಪಾತ್ರೆಗಳೂ ಇರುವ ಕೊಠಡಿಗಳಲ್ಲಿ ಇಡಬೇಕು. ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವದಿಲ್ಲ ಎಂದು ಬರೆದುಕೊಟ್ಟರು.


ಕೋಪಗೊಂಡು ಅವರನ್ನು ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು -


ಆಗ ನಾನು ಯೆಹೂದ ಶ್ರೀಮಂತರಿಗೆ - ನೀವು ಮಾಡುವದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತೀರಿ.


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ನಾನು ಬಾಗಲು ದಾಟದೆ ಮೌನವಾಗಿದ್ದು ಸಾಮಾನ್ಯ ಜನರ ಹಾಗೆ ನನ್ನ ದ್ರೋಹಗಳನ್ನು ಮರೆಮಾಜಿ ಎದೆಯಲ್ಲಿ ನನ್ನ ಪಾಪವನ್ನು ಬಚ್ಚಿಟ್ಟುಕೊಂಡಿದ್ದರೆ -


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು