Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:15 - ಕನ್ನಡ ಸತ್ಯವೇದವು J.V. (BSI)

15 ಆ ಕಾಲದಲ್ಲಿ ಜನರು ಸಬ್ಬತ್‍ದಿವಸ ಯೆಹೂದ ದೇಶದಲ್ಲಿ ತೊಟ್ಟಿಯೊಳಗೆ ದ್ರಾಕ್ಷೆತುಳಿಯುವದನ್ನೂ ಕಣದ ಕಾಳನ್ನು ಕೂಡಿಸಿ ಆ ಕಾಳು ದ್ರಾಕ್ಷಾರಸ ದ್ರಾಕ್ಷೆ ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇವಿುಗೆ ತರುವದನ್ನೂ ಕಂಡು ಅವರು ಆ ಆಹಾರಪದಾರ್ಥಗಳನ್ನು ಮಾರುವದಕ್ಕೆ ಬಂದಾಗ ಅವರನ್ನು ಗದರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ದಿವಸಗಳಲ್ಲಿ ಯೆಹೂದದ ಜನರು ಸಬ್ಬತ್ ದಿನದಲ್ಲಿ ಕೆಲಸ ಮಾಡುವುದನ್ನು ನೋಡಿದೆನು. ಅವರು ದ್ರಾಕ್ಷಿಯನ್ನು ತುಳಿದು ದ್ರಾಕ್ಷಾರಸ ತಯಾರಿಸುತ್ತಿದ್ದರು. ದವಸಧಾನ್ಯಗಳನ್ನು ಕತ್ತೆಗಳ ಮೇಲೆ ಹೇರಿಸಿಕೊಂಡು ಹೋಗುತ್ತಿದ್ದರು. ಬೆಳೆಯನ್ನು ಮಾರಲು ಜೆರುಸಲೇಮಿಗೆ ಬರುತ್ತಿದ್ದರು. ನಾನು ಅವರನ್ನು ಕಟುವಾಗಿ ಎಚ್ಚರಿಸಿ ಇನ್ನು ಮುಂದೆ ಸಬ್ಬತ್ ದಿನದಲ್ಲಿ ಪಟ್ಟಣದೊಳಗೆ ಏನನ್ನೂ ತರಬಾರದೆಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:15
31 ತಿಳಿವುಗಳ ಹೋಲಿಕೆ  

ದೇಶನಿವಾಸಿಗಳು ಮಾರುವದಕ್ಕೋಸ್ಕರ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವದಿಲ್ಲ; ಪ್ರತಿಯೊಂದು ಏಳನೆಯ ವರುಷ [ಭೂವಿುಯ ಸಾಗುವಳಿಯನ್ನೂ ] ಹೆರರು ಕೊಡಬೇಕಾದ ಸಾಲವನ್ನೂ ಬಿಟ್ಟು ಬಿಡುತ್ತೇವೆ;


ಕಡೆಯಲ್ಲಿ ನಾನು ಅವರನ್ನು - ನೀವು ಗೋಡೆಯ ಹೊರಗೇಕೆ ಇಳುಕೊಂಡಿದ್ದೀರಿ? ನೀವು ತಿರಿಗಿ ಹೀಗೆ ಮಾಡಿದರೆ ನಿಮ್ಮನ್ನು ಹಿಡಿಸುವೆನು ಎಂದು ಗದರಿಸಲು ಅವರು ಅಂದಿನಿಂದ ಸಬ್ಬತ್‍ದಿನದಲ್ಲಿ ತಿರಿಗಿ ಬರಲಿಲ್ಲ.


ಆರು ದಿವಸಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನೂ ಮಾಡದೆ ಇರಬೇಕು. ಉಳುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಹಾಗೆಯೇ ಏಳನೆಯ ದಿನದಲ್ಲಿ ಕೆಲಸಮಾಡದೆ ಇರಬೇಕು.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು ಆ ನನ್ನ ಪರಿಶುದ್ಧ ದಿವಸದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ ಸ್ವೇಚ್ಫೆಯಾಗಿ ನಡೆಯದೆ ಸ್ವಕಾರ್ಯದಲ್ಲಿ ನಿರತರಾಗದೆ ಹರಟೆಹರಟದೆ ಯೆಹೋವನ ಸಬ್ಬತ್ತೆಂಬ ಪರಿಶುದ್ಧ ದಿನವು ಉಲ್ಲಾಸಕರವೂ ಮಾನ್ಯವೂ ಆದದ್ದೆಂದು ಘನಪಡಿಸಿದರೆ


ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇವಿುನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ ಆ ದಿನವನ್ನು ನನ್ನ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇವಿುನ ಉಪ್ಪರಿಗೆಗಳನ್ನು ದಹಿಸಿಬಿಡುವದು, ಆರುವದೇ ಇಲ್ಲ.


ಯೆಹೋವನಾದ ನನ್ನ ನುಡಿ ಇದೇ - ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ ಯಾವ ಕೆಲಸವನ್ನೂ ಮಾಡದೆ ಆ ದಿನವನ್ನು ನನ್ನ ದಿನವೆಂದು ಆಚರಿಸಿದರೆ


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ಆರು ದಿನಗಳು ಕೆಲಸನಡೆಯಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾದ್ದರಿಂದ ಅದರಲ್ಲಿ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು;


ನನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಎಚ್ಚರಿಸಿದಿ. ಆದರೂ ಅವರು ಲಾಲಿಸದೆ ಗರ್ವಿಗಳೂ ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು; ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿ ನ್ಯಾಯಗಳನ್ನು ಮೀರಿ ಪಾಪಮಾಡಿ ಹೆಗಲು ಕೊಡದೆ ಮೊಂಡಬಿದ್ದು ನಿನ್ನ ಮಾತನ್ನು ಕೇಳದೆ ಹೋದರು.


ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.


ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ - ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಬೇರೆ ಅನೇಕವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು - ವಕ್ರಬುದ್ಧಿಯುಳ್ಳ ಈ ಸಂತತಿಯವರಿಂದ ತಪ್ಪಿಸಿಕೊಳ್ಳಿರಿ ಎಂದು ಅವರನ್ನು ಎಚ್ಚರಿಸಿದನು.


ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು, ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿ ಹೇಳು.


ಯೆಹೂದ್ಯರಲ್ಲಿ ಉಳಿದವರೇ, ಯೆಹೋವನು ನಿಮ್ಮನ್ನು ಕುರಿತು - ಐಗುಪ್ತಕ್ಕೆ ಹೋಗಬೇಡಿರಿ ಎಂದು ಅಪ್ಪಣೆಮಾಡಿದ್ದಾನೆ; ನಾನು ಈ ದಿವಸ [ಆ ಮಾತನ್ನು] ನಿಮಗೆ ಪ್ರಕಟಿಸಿದ್ದೇನೆ, ಚೆನ್ನಾಗಿ ತಿಳಿದಿರಲಿ.


[ಆತನು ಆಜ್ಞಾಪಿಸುವದೇನಂದರೆ - ] ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ, ಕೇಳಿರಿ.


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿ ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರೂ ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್‍ದಿನದಲ್ಲಿ ಯೆರೂಸಲೇವಿುನಲ್ಲೇ ಮಾರುತ್ತಿದ್ದರು.


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು


ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾದದ್ದೇನಂದರೆ - ನಾನು ನೇವಿುಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ನೀವು ತಿಳುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು.


ಆದದರಿಂದ ಇಸ್ರಾಯೇಲ್ಯರು ಸಬ್ಬತ್ ದಿವಸವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಬಂಧನೆ.


ವರುಷಕ್ಕೆ ಒಂದು ಶೆಕೆಲಿನ ಮೂರನೆಯ ಭಾಗವನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ;


ಅದು ನಿನ್ನ ಕಣದಲ್ಲಿ ಕಾಳನ್ನು ಕೂಡಿಸಿ ನಿನ್ನ ಬೆಳೆಯನ್ನು ಹೊತ್ತುಕೊಂಡು ಬರುವದೆಂದು ಭರವಸವಿಡುವಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು