Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:17 - ಕನ್ನಡ ಸತ್ಯವೇದವು J.V. (BSI)

17 ಆಗ ನಾನು ಯೆಹೂದ ಶ್ರೀಮಂತರಿಗೆ - ನೀವು ಮಾಡುವದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ನಾನು ಯೆಹೂದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಯೆಹೂದ ಪ್ರಾಂತದ ಗೌರವಸ್ಥ ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ ಅವರಿಗೆ, “ಸಬ್ಬತ್ ದಿನವನ್ನು ನೀವು ಅಪವಿತ್ರ ಮಾಡುವ ಈ ಕೆಟ್ಟ ಕಾರ್ಯವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:17
14 ತಿಳಿವುಗಳ ಹೋಲಿಕೆ  

ಇದರ ದೆಸೆಯಿಂದ ನಾನು ಅಧಿಕಾರಿಗಳೊಡನೆ - ದೇವಾಲಯವನ್ನು ಅಲಕ್ಷ್ಯಮಾಡಿದ್ದೇಕೆ ಎಂಬದಾಗಿ ವಾದಿಸಿ ಬಿಟ್ಟುಹೋದವರನ್ನು ತಿರಿಗಿ ಕರಿಸಿ ಅವರನ್ನು ಅವರವರ ಉದ್ಯೋಗಗಳಲ್ಲಿರಿಸಿದೆನು.


ಕೋಪಗೊಂಡು ಅವರನ್ನು ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕಿತ್ತು -


ನ್ಯಾಯಕ್ಕೆ ಅಸಹ್ಯಪಟ್ಟು ನೆಟ್ಟಗಿರುವದನ್ನು ಸೊಟ್ಟಗೆ ಮಾಡುವ ಯಾಕೋಬ್ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧ್ಯಕ್ಷರೇ,


ನಾನು ಹೀಗೆ ಸಾರಿದೆನು - ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧ್ಯಕ್ಷರೇ, ಕೇಳಿರಿ, ಕೇಳಿರಿ! ನ್ಯಾಯವನ್ನು ಮಂದಟ್ಟುಮಾಡಿಕೊಳ್ಳುವದು ನಿಮ್ಮ ಧರ್ಮವಲ್ಲವೆ.


ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.


ನಾನು ದೊಡ್ಡ ಮನುಷ್ಯರ ಬಳಿಗೆ ಹೋಗಿ ಅವರ ಸಂಗಡ ಮಾತಾಡುವೆನು; ಯೆಹೋವನ ಮಾರ್ಗವೂ ಅವರ ದೇವರ ನ್ಯಾಯವಿಧಿಗಳೂ ಅವರಿಗೆ ಗೊತ್ತು ಅಂದುಕೊಂಡೆನು. ಆದರೆ ಈ ದೊಡ್ಡ ಮನುಷ್ಯರು ಒಮ್ಮನವಾಗಿ [ತಮ್ಮ ಹೆಗಲ] ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತುಬಿಟ್ಟಿದ್ದಾರೆ.


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ಧರ್ಮೋಪದೇಶವನ್ನು ಕೈಕೊಳ್ಳದವರು ದುಷ್ಟರನ್ನು ಹೊಗಳುವರು, ಕೈಕೊಳ್ಳುವವರು ಅವರನ್ನು ಎದುರಿಸುವರು.


ನಾನು ತುಸು ಆಲೋಚಿಸಿಕೊಂಡು ಶ್ರೀಮಂತರಿಗೂ ಅಧಿಕಾರಿಗಳಿಗೂ - ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವದೆಂದರೇನು ಎಂದು ಹೇಳಿ ಅವರೊಡನೆ ಬಹಳವಾಗಿ ಹೆಣಗಾಡಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿ -


ಇದಲ್ಲದೆ ದೇಶದಲ್ಲಿ ವಾಸಿಸುತ್ತಿದ್ದ ತೂರ್ಯರೂ ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್‍ದಿನದಲ್ಲಿ ಯೆರೂಸಲೇವಿುನಲ್ಲೇ ಮಾರುತ್ತಿದ್ದರು.


ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.


ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು