Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:18 - ಕನ್ನಡ ಸತ್ಯವೇದವು J.V. (BSI)

18 ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದ ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ ನಮ್ಮ ಪಟ್ಟಣದ ಮೇಲೆಯೂ ಬರಮಾಡಿದನಲ್ಲವೇ. ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲ್ಯರ ಮೇಲಿದ್ದ ದೇವಕೋಪವನ್ನು ಹೆಚ್ಚಿಸುತ್ತೀರೇನು ಎಂದು ಹೇಳಿ ಅವರನ್ನು ಗದರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿಮ್ಮ ಪೂರ್ವಿಕರು ಹೀಗೆ ಮಾಡಿದರೋ? ನಮ್ಮ ದೇವರು ಈ ಎಲ್ಲಾ ಕೇಡನ್ನು ನಮ್ಮ ಮೇಲೆಯೂ, ನಮ್ಮ ಪಟ್ಟಣದ ಮೇಲೆಯೂ ಬರಮಾಡಿದ್ದನಲ್ಲವೇ? ಹೀಗಿರಲಾಗಿ ನೀವೂ ಸಬ್ಬತ್ ದಿನವನ್ನು ಅಶುದ್ಧಮಾಡಿ ಇಸ್ರಾಯೇಲರ ಮೇಲೆ ದೈವಕೋಪವನ್ನು ಹೆಚ್ಚಿಸುತ್ತೀರಿ” ಎಂದು ಹೇಳಿ ಅವರನ್ನು ಗದರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದಲೆ ನಮ್ಮ ದೇವರು ಎಲ್ಲಾ ಕೇಡನ್ನು ನಮ್ಮ ಮೇಲೂ ನಮ್ಮ ಪಟ್ಟಣದ ಮೇಲೂ ಬರಮಾಡಿದ್ದಾರೆ. ಹೀಗಿರಲಾಗಿ, ನೀವೂ ಸಬ್ಬತ್‍ದಿನವನ್ನು ಅಶುದ್ಧಮಾಡಿ ಇಸ್ರಯೇಲರ ಮೇಲಿದ್ದ ದೇವಕೋಪವನ್ನು ಹೆಚ್ಚಿಸಬೇಡಿ,” ಎಂದು ಹೇಳಿ ಅವರನ್ನು ಗದರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಮ್ಮ ಪೂರ್ವಿಕರೂ ಇದೇ ರೀತಿ ಮಾಡಿದರು. ಆ ಕಾರಣದಿಂದ ನಮ್ಮ ದೇವರು ಇಂಥಾ ತೊಂದರೆಗಳನ್ನು ನಮ್ಮ ನಗರಕ್ಕೆ ತಂದೊಡ್ಡಿದನು. ನೀವು ಸಬ್ಬತ್ ದಿನವನ್ನು ಅಶುದ್ಧಮಾಡಿ ನಿಮ್ಮ ಮೇಲೆ ಇನ್ನೂ ಹೆಚ್ಚಿನ ಕೋಪವನ್ನು ಬರಮಾಡಿಕೊಳ್ಳುತ್ತಿದ್ದೀರಿ. ದೇವರು ಇದಕ್ಕಾಗಿ ಭಯಂಕರ ಶಿಕ್ಷೆಯನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ, ನಮ್ಮ ದೇವರು ನಮ್ಮ ಮೇಲೆಯೂ, ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲಿಲ್ಲವೋ? ಆದರೆ ನೀವು ಸಬ್ಬತ್ ದಿನವನ್ನು ಅಪವಿತ್ರ ಮಾಡುವುದರಿಂದ ಇಸ್ರಾಯೇಲಿನ ಮೇಲೆ ಇನ್ನೂ ದೇವರ ಕೋಪವನ್ನು ಬರಮಾಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:18
16 ತಿಳಿವುಗಳ ಹೋಲಿಕೆ  

ನಿನ್ನ ವಸ್ತ್ರಗಳನ್ನು ಸೆಳೆದು ನಿನ್ನ ಚಂದದ ಒಡವೆಗಳನ್ನು ಕಳಚಿಬಿಡುವರು.


ಅವಳು ಐಗುಪ್ತದಲ್ಲಿದ್ದಂದಿಂನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ ಅವಳ ಎಳೆಯ ತೊಟ್ಟುಗಳನ್ನು ನಸುಕಿ ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ನಿಮ್ಮ ಪಿತೃಗಳು, ಯೆಹೂದದ ಅರಸರು, ಅವರ ಹೆಂಡಿರು, ನೀವು, ನಿಮ್ಮ ಹೆಂಡಿರು, ಇವರೆಲ್ಲರೂ ಯೆಹೂದದೇಶದಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ನಡಿಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇವಿುನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ ಆ ದಿನವನ್ನು ನನ್ನ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇವಿುನ ಉಪ್ಪರಿಗೆಗಳನ್ನು ದಹಿಸಿಬಿಡುವದು, ಆರುವದೇ ಇಲ್ಲ.


ಈಗ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲ್ಯರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಲ್ಲಾ.


ನಾನು ನಿಮಗೆ ವಿರೋಧವಾಗಿ ಕೋಪದಿಂದ ನಡೆಯುವವನಾಗಿ ನಿಮ್ಮ ಪಾಪಗಳ ನಿಮತ್ತ ಏಳರಷ್ಟಾಗಿ ಶಿಕ್ಷಿಸುವೆನು.


ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆಹೋದರೆ ನಾನು ನಿಮ್ಮ ಪಾಪಗಳ ನಿವಿುತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.


ನೀವು ನಡಿಸಿದ ದುರಾಚಾರಗಳನ್ನೂ ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ಬೆರಗಿಗೂ ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ನೀವು ಯೆಹೋವನ ಮಾತನ್ನು ಕೇಳದೆ ಆತನ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ ಆತನಿಗೆ ಪಾಪಮಾಡಿ [ಅನ್ಯದೇವತೆಗಳಿಗೆ] ಧೂಪ ಹಾಕಿದ್ದರಿಂದಲೇ ಇಂಥಾ ಕೇಡು ನಿಮಗೆ ಸಂಭವಿಸಿದೆ.


ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾದದ್ದೇನಂದರೆ - ನಾನು ನೇವಿುಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ನೀವು ತಿಳುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು.


ವರುಷಕ್ಕೆ ಒಂದು ಶೆಕೆಲಿನ ಮೂರನೆಯ ಭಾಗವನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ;


ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು