ನೆಹೆಮೀಯ 13:2 - ಕನ್ನಡ ಸತ್ಯವೇದವು J.V. (BSI)2 ಯಾಕಂದರೆ ಅವರು ಇಸ್ರಾಯೇಲ್ಯರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಅಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವದಾಗಿ ಕಂಡು ಬಂತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಏಕೆಂದರೆ ಅವರು ಇಸ್ರಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರೆಸಿದ್ದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದರು ಎಂಬ ಮಾತು ಬರೆದಿರುವುದಾಗಿ ಗೊತ್ತಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾಕೆಂದರೆ ಅವರು ಇಸ್ರೇಲರಿಗೆ ಆಹಾರವನ್ನಾಗಲಿ ನೀರನ್ನಾಗಲಿ ಕೊಟ್ಟಿರಲಿಲ್ಲ. ಅಲ್ಲದೆ ಅವರು ಬಿಳಾಮನಿಗೆ ಹಣಕೊಟ್ಟು ಇಸ್ರೇಲರನ್ನು ಶಪಿಸುವಂತೆ ಮಾಡಿದರು. ಆದರೆ ನಮ್ಮ ದೇವರು ಆ ಶಾಪವನ್ನು ನಮಗೆ ಆಶೀರ್ವಾದವಾಗುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಏಕೆಂದರೆ ಅವರು ಅನ್ನಪಾನಗಳೊಡನೆ ಇಸ್ರಾಯೇಲರನ್ನು ಎದುರುಗೊಳ್ಳಲಿಲ್ಲ. ಅವರು ಇಸ್ರಾಯೇಲರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಕರೆಸಿದ್ದರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದರು. ಅಧ್ಯಾಯವನ್ನು ನೋಡಿ |