ನೆಹೆಮೀಯ 13:26 - ಕನ್ನಡ ಸತ್ಯವೇದವು J.V. (BSI)26 ಅಂಥ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್‍ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ. ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ; ಅವನು ತನ್ನ ದೇವರಿಗೆ ವಿಶೇಷ ಪ್ರಿಯನು; ಆದದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನನ್ನಾಗಿ ನೇವಿುಸಿದನು. ಆದರೂ ಅನ್ಯದೇಶಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇಂತಹ ಸ್ತ್ರೀಯರ ದೆಸೆಯಿಂದ ಇಸ್ರಾಯೇಲ್ ರಾಜನಾದ ಸೊಲೊಮೋನನು ದೋಷಿಯಾದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ. ಅವನು ತನ್ನ ದೇವರಿಗೆ ಪ್ರಿಯನಾಗಿದ್ದನು. ಆದ್ದರಿಂದ ದೇವರು ಅವನನ್ನು ಎಲ್ಲಾ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದನು. ಆದರೂ ಅನ್ಯದೇಶದ ಸ್ತ್ರೀಯರು ಅವನನ್ನು ಪಾಪದಲ್ಲಿ ಬೀಳಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇಂಥ ಮದುವೆಗಳಿಂದಾಗಿ ಸೊಲೊಮೋನನು ಪಾಪಕ್ಕೆ ಒಳಗಾದನು ಎಂಬುದು ನಿಮಗೆ ತಿಳಿಯದೋ? ಅವನಂಥ ವೈಭವಶಾಲಿ ಅರಸನು ಯಾವ ರಾಜ್ಯದಲ್ಲಿಯೂ ಇರಲಿಲ್ಲ. ದೇವರು ಸೊಲೊಮೋನನನ್ನು ಪ್ರೀತಿಸಿದನು. ಇಡೀ ಇಸ್ರೇಲಿಗೆ ಅವನನ್ನು ಅರಸನನ್ನಾಗಿ ಮಾಡಿದನು. ಅಂಥವನೂ ಅನ್ಯಸ್ತ್ರೀಯರಿಂದಾಗಿ ಪಾಪ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇಸ್ರಾಯೇಲಿನ ಅರಸನಾದ ಸೊಲೊಮೋನನು ಇಂತಹ ಮದುವೆಗಳಿಂದ ಪಾಪ ಮಾಡಿದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ, ಅವನು ತನ್ನ ದೇವರಿಗೆ ವಿಶೇಷಪ್ರಿಯನಾಗಿದ್ದನು, ಆದ್ದರಿಂದಲೇ ದೇವರು ಅವನನ್ನು ಎಲ್ಲ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ವಿದೇಶಿ ಸ್ತ್ರೀಯರು ಅವನನ್ನು ಕೂಡ ಪಾಪಮಾಡುವ ಹಾಗೆ ಮಾಡಿದರು. ಅಧ್ಯಾಯವನ್ನು ನೋಡಿ |