Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:29 - ಕನ್ನಡ ಸತ್ಯವೇದವು J.V. (BSI)

29 ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ; ಇದನ್ನು ನೆನಪು ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನ ದೇವರೇ, ಆ ಮನುಷ್ಯರನ್ನು ಶಿಕ್ಷಿಸು. ಅವರು ಯಾಜಕತ್ವವನ್ನು ಹೊಲಸು ಮಾಡಿದ್ದಾರೆ. ಅದನ್ನು ಅವರು ಸಾಮಾನ್ಯವೆಂದೆಣಿಸಿದ್ದಾರೆ. ಯಾಜಕರೊಂದಿಗೆ ಮತ್ತು ಲೇವಿಯರೊಂದಿಗೆ ನೀನು ಮಾಡಿದ ಒಡಂಬಡಿಕೆಯನ್ನು ಅವರು ತಿರಸ್ಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಒಡಂಬಡಿಕೆಯನ್ನೂ, ಅಶುದ್ಧ ಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:29
12 ತಿಳಿವುಗಳ ಹೋಲಿಕೆ  

ನನ್ನ ದೇವರೇ, ಟೋಬೀಯ ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿನ್ನ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಇಲ್ಲವಾದರೆ ಅವನ ಸಂತತಿಯು ಸ್ವಜನರೊಳಗೆ ಅಪವಾದಕ್ಕೆ ಗುರಿಯಾದೀತು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ಅವನಿಗೆ ಕಳಂಕವಿರುವದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು