Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 13:3 - ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ವಿುಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲಾ ಮಿಶ್ರಜಾತಿಯವರನ್ನು ತಮ್ಮ ಮಧ್ಯದಿಂದ ಬೇರ್ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲ ಮಿಶ್ರಜಾತಿ ಅವರನ್ನು ತಮ್ಮ ಮಧ್ಯೆಯಿಂದ ಬೇರ್ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲರು ದೇವರ ಕಟ್ಟಳೆಯನ್ನು ಕೇಳಿ ಅದಕ್ಕೆ ವಿಧೇಯರಾದರು. ಅನ್ಯರ ಸಂತತಿಯವರಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಜನರು ದೇವರ ನಿಯಮವನ್ನು ಕೇಳಿದಾಗ, ಇಸ್ರಾಯೇಲರೊಳಗಿಂದ ವಿದೇಶಿ ಜನರನ್ನು ಪ್ರತ್ಯೇಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 13:3
12 ತಿಳಿವುಗಳ ಹೋಲಿಕೆ  

ಇಸ್ರಾಯೇಲ್‍ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.


ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಹೋದರು; ಕುರಿದನ ಮೊದಲಾದ ಪಶುಗಳೂ ಬಹಳವಾಗಿದ್ದವು. ಅವರು ಐಗುಪ್ತದೇಶದಿಂದ ತಂದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು.


ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನದಾಸರು, ಉಳಿದ ಜನರು ಇವರಲ್ಲಿ ದೇವರ ಧರ್ಮೋಪದೇಶದ ನಿವಿುತ್ತವಾಗಿ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು ತಮ್ಮ ತಮ್ಮ ಹೆಂಡತಿಯರು, ಗ್ರಹಿಸಶಕ್ತರಾದ ಗಂಡು ಹೆಣ್ಣು ಮಕ್ಕಳು ಇವರೊಡನೆ ಬಂದು ಮುಖಂಡರಾದ ತಮ್ಮ ಸಹೋದರರನ್ನು ಕೂಡಿಕೊಂಡು


ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲ್ಯರು ಕೂಡ ತಿರಿಗಿ ಅತ್ತುಕೊಂಡು - ಮಾಂಸವು ನಮಗೆ ಹೇಗೆ ಲಭಿಸೀತು;


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರುಹು ಉಂಟಾಗುತ್ತದಷ್ಟೆ.


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ನಿನಗೆ ವಿರೋಧವಾಗಿ ಪಾಪಮಾಡದಂತೆ ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವದು ಯಾವದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವದರಿಂದಲೇ.


ಈಗ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ ಅನ್ನಲು


ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಗಳನ್ನು ತೆಗೆದುಕೊಂಡದರಿಂದ ದೇವಕುಲವು ಅನ್ಯದೇಶಗಳವರೊಡನೆ ವಿುಶ್ರವಾಯಿತು. ಪ್ರಭುಗಳೂ ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು ಎಂದು ತಿಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು