ನೆಹೆಮೀಯ 13:5 - ಕನ್ನಡ ಸತ್ಯವೇದವು J.V. (BSI)5 ಇವನು ಟೋಬೀಯನ ಬೀಗನಾಗಿದ್ದದರಿಂದ ನೈವೇದ್ಯದ್ರವ್ಯ ಧೂಪ ಪಾತ್ರೆ ಇವುಗಳನ್ನೂ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯ ಗಾಯಕ ದ್ವಾರಪಾಲಕ ಇವರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವದಕ್ಕಾಗಿ ಉಪಯೋಗವಾಗುತ್ತಿದ್ದ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೈವೇದ್ಯದ್ರವ್ಯ, ಧೂಪಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ ಹಾಗು ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗಾಗಿ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಅವನಿಗಾಗಿ ಸಿದ್ಧಮಾಡಿಸಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಲೇವಿಯರಿಗೂ, ಹಾಡುಗಾರರಿಗೂ, ದ್ವಾರಪಾಲಕರಿಗೂ ನೇಮಕವಾದ ಕಾಣಿಕೆಗಳನ್ನೂ, ಧೂಪವನ್ನೂ, ಸಾಮಗ್ರಿಗಳನ್ನೂ, ಧಾನ್ಯದ ಹತ್ತನೆಯ ಪಾಲುಗಳನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇಡುತ್ತಿದ್ದ ದೊಡ್ಡ ಕೊಠಡಿಯನ್ನು ಎಲ್ಯಾಷೀಬನು ಟೋಬೀಯನಿಗೋಸ್ಕರ ಸಿದ್ಧ ಮಾಡಿಕೊಟ್ಟಿದ್ದನು. ಅಧ್ಯಾಯವನ್ನು ನೋಡಿ |