ನೆಹೆಮೀಯ 2:10 - ಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲ್ಯರ ಹಿತಚಿಂತಕನೊಬ್ಬನು ಬಂದನೆಂಬ ವರ್ತಮಾನವು ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್‍ದೇಶದವನಾದ ಟೋಬೀಯ ಎಂಬ ದಾಸನಿಗೂ ಮುಟ್ಟಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಏನು ಮಾಡುತ್ತಿದ್ದೇನೆಂದು ಸನ್ಬಲ್ಲಟ್ ಮತ್ತು ಟೋಬೀಯ ಎಂಬವರಿಬ್ಬರು ಕೇಳಿಸಿಕೊಂಡರು. ಇಸ್ರೇಲ್ ಜನರಿಗೆ ಸಹಾಯ ಮಾಡಲು ಬರುತ್ತಿದ್ದಾರೆಂಬ ವಿಷಯವು ಅವರನ್ನು ತಳಮಳಗೊಳಿಸಿತು ಮತ್ತು ಅವರಿಗೆ ಸಿಟ್ಟೂ ಬಂದಿತು. ಸನ್ಬಲ್ಲಟನು ಹೋರೋನಿನವನು ಮತ್ತು ಟೋಬೀಯನು ಅಮ್ಮೋನಿಯ ಅಧಿಕಾರಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು. ಅಧ್ಯಾಯವನ್ನು ನೋಡಿ |