ನೆಹೆಮೀಯ 2:16 - ಕನ್ನಡ ಸತ್ಯವೇದವು J.V. (BSI)16 ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಕೆಲಸನಡಿಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನು ಆ ವರೆಗೆ ಯೆಹೂದ್ಯರಿಗೂ, ಯಾಜಕರಿಗೂ, ಶ್ರೀಮಂತರಿಗೂ, ಅಧಿಕಾರಿಗಳಿಗೂ ಕೆಲಸ ಮಾಡುವ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬುದು ಯಾರಿಗೂ ಗೊತ್ತಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಹಾಗು ಕೆಲಸ ನಡೆಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ, ನಾನು ಎಲ್ಲಿ ಹೋಗಿದ್ದೆ, ಏನು ಮಾಡಿದೆ ಎಂಬುದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇಸ್ರೇಲಿನ ನಾಯಕರಿಗೂ ಅಧಿಕಾರಿಗಳಿಗೂ ನಾನು ಎಲ್ಲಿಗೆ ಹೋದೆನೆಂದು ತಿಳಿದಿರಲಿಲ್ಲ; ನಾನು ಏನು ಮಾಡುತ್ತಿದ್ದೇನೆಂದೂ ಅವರಿಗೆ ಗೊತ್ತಿರಲಿಲ್ಲ. ಯೆಹೂದ್ಯರಿಗಾಗಲಿ ಅಧಿಕಾರಿಗಳಿಗಾಗಲಿ ರಾಜನಿಂದ ನೇಮಕಗೊಂಡ ಕೆಲಸವರ್ಗದವರಿಗಾಗಲಿ ನಾನು ಇನ್ನೂ ಯಾವ ವಿಷಯವನ್ನೂ ಹೇಳಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನು ಎಲ್ಲಿ ಹೋದೆನೆಂದೂ, ಏನು ಮಾಡಿದೆನೆಂದೂ ಅಧಿಕಾರಿಗಳು ತಿಳಿಯದೆ ಇದ್ದರು. ಅಲ್ಲಿಯವರೆಗೆ ನಾನು ಯೆಹೂದ್ಯರಿಗಾದರೂ, ಯಾಜಕರಿಗಾದರೂ, ಶ್ರೀಮಂತರಿಗಾದರೂ, ಅಧಿಕಾರಿಗಳಿಗಾದರೂ, ಕೆಲಸ ಮಾಡುವ ಇತರ ಜನರಿಗಾದರೂ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿ |