Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:17 - ಕನ್ನಡ ಸತ್ಯವೇದವು J.V. (BSI)

17 ಆಗ ನಾನು ಅವರಿಗೆ - ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೋ; ಯೆರೂಸಲೇಮ್ ಪಟ್ಟಣವು ಹಾಳುಬಿದ್ದದೆ, ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇವಿುನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಹೋಗುವದು ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಅವರಿಗೆ, “ನಮ್ಮ ದುರಾವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ; ಯೆರೂಸಲೇಮ್ ಪಟ್ಟಣವು ಹಾಳು ಬಿದ್ದಿದೆ, ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ; ಬನ್ನಿರಿ, ಯೆರೂಸಲೇಮಿನ ಗೋಡೆಯನ್ನು ಕಟ್ಟೋಣ. ಹೀಗೆ ಮಾಡಿದರೆ ನಮ್ಮ ಮೇಲಣ ನಿಂದೆಯು ಅಳಿಸಿ ಹೋಗುವುದು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಮೇಲೆ ನಾನು ಎಲ್ಲಾ ಜನರಿಗೆ, “ನಮ್ಮ ದುರವಸ್ಥೆಯನ್ನು ನೀವು ನೋಡುತ್ತಿದ್ದೀರಿ. ಜೆರುಸಲೇಮ್ ಒಂದು ಹಾಳು ದಿಬ್ಬವಾಗಿದೆ; ಅದರ ಬಾಗಿಲುಗಳು ಸುಟ್ಟು ಬೂದಿಯಾಗಿವೆ. ಬನ್ನಿರಿ, ನಾವು ಜೆರುಸಲೇಮಿನ ಪೌಳಿಗೋಡೆಗಳನ್ನು ತಿರುಗಿ ಕಟ್ಟೋಣ. ಆಗ ನಾವು ಇನ್ನೆಂದಿಗೂ ನಾಚಿಕೆಗೆ ಗುರಿಯಾಗುವುದಿಲ್ಲ” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:17
23 ತಿಳಿವುಗಳ ಹೋಲಿಕೆ  

ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.


ಅವರು ನನಗೆ - ಸೆರೆಯವರೊಳಗೆ ತಪ್ಪಿಸಿಕೊಂಡು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇವಿುನ ಪೌಳಿಗೋಡೆಯು ಕೆಡವಲ್ಪಟ್ಟಿರುತ್ತದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುತ್ತವೆ ಎಂದು ಹೇಳಿದರು.


ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣವರ ಪರಿಹಾಸ್ಯ ಕುಚೋದ್ಯಗಳಿಗೆ ಗುರಿಯಾದೆವು.


ನನ್ನ ಪಟ್ಟಣದ ಯುವತಿಯರಿಗಾಗಿ ಅತ್ತತ್ತು ಕಣ್ಣುರಿಯಿಂದ ಪೀಡಿತನಾಗಿದ್ದೇನೆ.


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ ರಾಜ್ಯವನ್ನೂ ಅಲ್ಲಿನ ಸರದಾರರನ್ನೂ ನೀಚಸ್ಥಿತಿಗೆ ತಂದಿದ್ದಾನೆ.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಸ್ವಾವಿುಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ ಏಳರಷ್ಟು ಪ್ರತಿಫಲವು ತುಂಬಿರುವಂತೆಮಾಡು.


ನಮ್ಮನ್ನು ನೆರೆಯವರ ನಿಂದೆಗೆ ಗುರಿಮಾಡಿದ್ದೀ; ಸುತ್ತಣ ಜನಾಂಗಗಳವರ ಪರಿಹಾಸ್ಯಕ್ಕೂ ಕುಚೋದ್ಯಕ್ಕೂ ಈಡಾದೆವು.


ಅದಕ್ಕೆ ಅವನು - ಎಲ್ಲಾ ಇಸ್ರಾಯೇಲ್ಯರನ್ನು ಅವಮಾನಪಡಿಸುವದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತುಹಾಕುತ್ತೇನೆ. ಇದಕ್ಕೆ ನೀವು ಒಪ್ಪುವಿರಾದರೆ ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುತ್ತೇನೆ ಎಂದು ಉತ್ತರಕೊಟ್ಟನು.


ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇವಿುನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಲಿಗೆ ಹೋದೆನು.


ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಕೆಲಸನಡಿಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದದರಿಂದ ನಾನು ಎಲ್ಲಿ ಹೋಗಿದ್ದೆನು, ಏನು ಮಾಡಿದೆನು ಎಂಬದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.


ಬುಗ್ಗೆಬಾಗಲನ್ನು ಜೀರ್ಣೋದ್ಧಾರ ಮಾಡಿದವನು ವಿುಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.


ನಮ್ಮನ್ನು ಅನ್ಯದೇಶೀಯರ ಗಾದೆಗೆ ಆಸ್ಪದ ಮಾಡಿದ್ದೀ; ಅವರು ನಮ್ಮನ್ನು ನೋಡಿ ತಲೆ ಆಡಿಸುತ್ತಾರೆ.


ಯೆಹೋವನು ಗತಿಹೀನರ ಮೊರೆಯನ್ನು ತಿರಸ್ಕರಿಸದೆ ನೆರವೇರಿಸಿದನೆಂದೂ


ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವದು; ಆ ದಿನದಲ್ಲಿ ನಿನ್ನ ಎಲ್ಲೆಯು ದೂರದ ತನಕ ವಿಸ್ತರಿಸಿಕೊಂಡಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು