Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:18 - ಕನ್ನಡ ಸತ್ಯವೇದವು J.V. (BSI)

18 ಇದಲ್ಲದೆ ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು - ಬನ್ನಿರಿ, ಕಟ್ಟೋಣ ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಅವರಿಗೆ ದೇವರು ನನಗೆ ಕರುಣೆಯನ್ನು ತೋರಿಸಿದ್ದನ್ನು ಮತ್ತು ರಾಜನು ಹೇಳಿದ ವಿಷಯಗಳನ್ನು ತಿಳಿಸಿದೆನು. ಆಗ ಅವರು, “ನಾವು ಈಗಲೇ ಕೆಲಸ ಪ್ರಾರಂಭಿಸೋಣ” ಎಂದು ಹೇಳಿದರು. ಹೀಗೆ ನಾವು ಈ ಒಳ್ಳೆಯ ಕಾರ್ಯವನ್ನು ಪ್ರಾರಂಭಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:18
10 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ಇದಲ್ಲದೆ ಅರಸನು ಧೈರ್ಯಗೊಂಡು ಅಲ್ಲಲ್ಲಿ ಬಿದ್ದುಹೋದ ಪೌಳಿಗೋಡೆಯನ್ನು ಜೀರ್ಣೋದ್ಧಾರಮಾಡಿಸಿ ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿ ದಾವೀದ ನಗರದ ವಿುಲ್ಲೋಕೋಟೆಯನ್ನು ಭದ್ರಪಡಿಸಿ ಅನೇಕಾಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.


ಧೈರ್ಯದಿಂದಿರು; ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ನಮ್ಮ ಪೌರುಷವನ್ನು ತೋರಿಸೋಣ. ಯೆಹೋವನು ತನಗೆ ಸರಿಕಾಣುವಂಥದನ್ನು ಮಾಡಲಿ ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ಇದಲ್ಲದೆ ಇಸ್ರಾಯೇಲ್‍ದೇವರ ಆಲಯವನ್ನು ಕಟ್ಟುವದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯ ಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ಯೆಹೂದ್ಯರು ನನ್ನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡಿರುವದರಿಂದ ಸೌಲನು ಸತ್ತು ಹೋದರೂ ಶೂರರಾಗಿರ್ರಿ, ನಿಮ್ಮ ಕೈಗಳು ಜೋಲು ಬೀಳದಿರಲಿ ಎಂದು ಹೇಳಿಸಿದನು.


ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು ಯೆಹೋವನ ಆಜ್ಞಾನುಸಾರವಾಗಿ ಇಸ್ರಾಯೇಲ್ಯರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.


ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ ದಾವೀದನಿಗೆ -


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೂ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಬೇಕು ಎಂದು ಬಿನ್ನವಿಸಲು ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು