ನೆಹೆಮೀಯ 2:5 - ಕನ್ನಡ ಸತ್ಯವೇದವು J.V. (BSI)5 ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ತಿರಿಗಿ ಕಟ್ಟುವದಕ್ಕೋಸ್ಕರ ಯೆಹೂದದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಮತ್ತು ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ, ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ಮರಳಿ ಕಟ್ಟುವುದಕ್ಕೆ ಜುದೇಯ ನಾಡಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು,” ಎಂದು ಹೇಳಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅನಂತರ ಅರಸನಿಗೆ, “ನಾನು ನಿನಗೆ ಮೆಚ್ಚಿಕೆಯಾಗಿದ್ದಲ್ಲಿ ಮತ್ತು ನಿನಗೆ ಈ ವಿಷಯ ಸರಿಕಂಡಲ್ಲಿ ದಯಮಾಡಿ ಯೆಹೂದ ಪ್ರಾಂತ್ಯದಲ್ಲಿ ನನ್ನ ಪೂರ್ವಿಕರ ಸಮಾಧಿಗಳಿರುವ ಜೆರುಸಲೇಮಿಗೆ ನನ್ನನ್ನು ಕಳುಹಿಸು. ನಾನು ಅಲ್ಲಿಗೆ ಹೋಗಿ ಜೆರುಸಲೇಮನ್ನು ಮತ್ತೆ ಕಟ್ಟಬೇಕು” ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅರಸನಿಗೆ, “ಅರಸನಿಗೆ ಮೆಚ್ಚಿಗೆಯಾದರೆ ಮತ್ತು ನಿಮ್ಮ ಸೇವಕನಿಗೆ ನಿಮ್ಮ ಮುಂದೆ ದಯೆ ದೊರಕಿದರೆ, ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವುದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು,” ಎಂದೆನು. ಅಧ್ಯಾಯವನ್ನು ನೋಡಿ |