Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:8 - ಕನ್ನಡ ಸತ್ಯವೇದವು J.V. (BSI)

8 ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೂ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಬೇಕು ಎಂದು ಬಿನ್ನವಿಸಲು ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಲ್ಲದೆ ಬಾಗಿಲುಗಳಿಗೆ, ಗೋಡೆಗಳಿಗೆ, ದೇವಾಲಯದ ಆವರಣದ ಗೋಡೆಗಳಿಗೆ ಮತ್ತು ನನ್ನ ಮನೆಗೆ ಮರದ ತೊಲೆಗಳು ಬೇಕಾಗಿವೆ. ಆದ್ದರಿಂದ ನಿಮ್ಮ ಅರಣ್ಯಗಳ ಮುಖ್ಯಾಧಿಕಾರಿಯಾದ ಆಸಾಫನಿಗೂ ಪತ್ರವನ್ನು ಕೊಡಬೇಕು” ಎಂದು ವಿನಂತಿಸಿದೆನು. ಅರಸನು ಪತ್ರಗಳನ್ನು ಮತ್ತು ನಾನು ಕೇಳಿದ್ದೆಲ್ಲವನ್ನು ನನಗೆ ಕೊಟ್ಟನು. ದೇವರು ನನ್ನನ್ನು ಕರುಣಿಸಿರುವುದರಿಂದ ರಾಜನು ನನಗೆ ಹಾಗೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:8
18 ತಿಳಿವುಗಳ ಹೋಲಿಕೆ  

ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವದು, ನಿಮ್ಮ ಎಲುಬುಗಳು ಹಸಿಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ಆಮೇಲೆ ನನ್ನ ತಮ್ಮನಾದ ಹನಾನಿಗೂ ಬಲು ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇವಿುನ ಮೇಲ್ವಿಚಾರಣೆಯನ್ನು ಒಪ್ಪಿಸಿ


ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.


ಯೆಹೂದ್ಯರ ಹಿರಿಯರು ತಮ್ಮ ದೇವರ ಕಟಾಕ್ಷಕ್ಕೆ ಪಾತ್ರರಾಗಿದ್ದದ್ದರಿಂದ ವಿಚಾರಿಸುವದಕ್ಕೆ ಬಂದವರು ಅವರಿಗೆ ಅಡ್ಡಿ ಮಾಡದೆ ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೋದರು.


ಅವನು ಯಾಕೋಬನಿಗೆ - ಇನ್ನು ಮೇಲೆ ನೀನು ಯಾಕೋಬನೆನ್ನಿಸಿಕೊಳ್ಳುವದಿಲ್ಲ; ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದ್ದರಿಂದ ನಿನಗೆ ಇಸ್ರಾಯೇಲೆಂದು ಹೆಸರುಂಟಾಗುವದು ಎಂದು ಹೇಳಿದನು.


ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರವಾಗಲಿ.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಆಗುವವೆಂದು ತಿಳಿಸಿದ ಸಂಗತಿಗಳನ್ನೇ ಹೊರತು ಇನ್ನೇನೂ ಹೇಳುವವನಲ್ಲ.


ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ನೀರಿನ ಕಾಲುವೆಗಳಂತೆ ಇವೆ; ತನಗೆ ಬೇಕಾದ ಕಡೆಗೆ ತಿರುಗಿಸುತ್ತಾನೆ.


ಅವನು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬಾಬೆಲಿನಿಂದ ಹೊರಟನು; ತನ್ನ ದೇವರ ಕೃಪಾಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇವಿುಗೆ ಸೇರಿದನು.


ಇದಲ್ಲದೆ ಇಸ್ರಾಯೇಲ್‍ದೇವರ ಆಲಯವನ್ನು ಕಟ್ಟುವದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯ ಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ತೋಟಗಳನ್ನೂ ಉದ್ಯಾನವನಗಳನ್ನೂ ಮಾಡಿಸಿ ಅವುಗಳಲ್ಲಿ ಸಕಲವಿಧವಾದ ಫಲವೃಕ್ಷಗಳನ್ನು ನಾಟಿಸಿಕೊಂಡೆನು.


ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವದಕ್ಕೆ ಕುಂಟೆಗಳನ್ನು ತೆಗೆಯಿಸಿಕೊಂಡೆನು.


ಆ ದೇವಾಲಯವನ್ನು ಕಟ್ಟುವದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ ಹೊಳೆಯಾಚೆಯ ಪ್ರಾಂತಗಳ ಕಪ್ಪದಿಂದ ತಡಮಾಡದೆ ಎಲ್ಲಾ ವೆಚ್ಚವನ್ನು ಕೊಡಬೇಕೆಂಬದಾಗಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು