Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 2:9 - ಕನ್ನಡ ಸತ್ಯವೇದವು J.V. (BSI)

9 ಅರಸನು ಅವುಗಳನ್ನು ನನಗೆ ಕೊಟ್ಟದ್ದಲ್ಲದೆ ನನ್ನನ್ನು ಸಾಗಕಳುಹಿಸುವದಕ್ಕೋಸ್ಕರ ಸೇನಾಧಿಪತಿಗಳನ್ನೂ ರಾಹುತರನ್ನೂ ಕಳುಹಿಸಿದನು. ಹೀಗೆ ನಾನು ಹೊಳೆಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅರಸನು ನನ್ನನ್ನು ಕಳುಹಿಸುವಾಗ ಸೇನಾಧಿಪತಿಗಳನ್ನೂ, ರಾಹುತರನ್ನೂ ನನ್ನೊಡನೆ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದೂ ಅಲ್ಲದೆ ನನ್ನನ್ನು ಸಾಗಕಳುಹಿಸುವುದಕ್ಕೆ ಸೇನಾಧಿಪತಿಗಳನ್ನೂ ರಾಹುತರನ್ನೂ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ರಾಜನ ಪತ್ರಗಳನ್ನು ಅವರಿಗೆ ತೋರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೂಫ್ರೇಟೀಸ್ ನದಿಯ ಪಶ್ಚಿಮದಲ್ಲಿರುವ ರಾಜ್ಯಪಾಲರಿಗೆ ಅರಸನು ಕೊಟ್ಟ ಪತ್ರವನ್ನು ಕೊಟ್ಟೆನು. ರಾಜನು ನನ್ನೊಂದಿಗೆ ಸಿಪಾಯಿಗಳನ್ನೂ ಸೈನ್ಯಾಧಿಪತಿಗಳನ್ನೂ ಅಶ್ವ ಸೈನಿಕರನ್ನೂ ಕಳುಹಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು, ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ, ಕುದುರೆ ಸವಾರರನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 2:9
2 ತಿಳಿವುಗಳ ಹೋಲಿಕೆ  

ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವದು; ಆತನ ಬಲವಾದ ರೌದ್ರಕ್ಕೆ ಆತನನ್ನು ತೊರೆದುಬಿಟ್ಟವರೆಲ್ಲರೂ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವದಕ್ಕೋಸ್ಕರ ಸೈನ್ಯವನ್ನೂ ಅಶ್ವಬಲವನ್ನೂ ಕೇಳಿಕೊಳ್ಳುವದಕ್ಕೆ ನಾಚಿಕೊಂಡಿದ್ದೆನು.


ತರುವಾಯ ನಾನು ಅರಸನಿಗೆ - ಹೊಳೆಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತಗಳಲ್ಲಿ ಹಾದು ಯೆಹೂದ ಸೀಮೆಗೆ ಹೋಗುವದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು