Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:13 - ಕನ್ನಡ ಸತ್ಯವೇದವು J.V. (BSI)

13 ತಗ್ಗಿನ ಬಾಗಲನ್ನು ಜೀರ್ಣೋದ್ಧಾರಮಾಡಿದವರು ಹಾನೂನನೂ ಜಾನೋಹ ಊರಿನವರೂ. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ಅಲ್ಲಿಂದ ತಿಪ್ಪೆಬಾಗಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಣಿವೆಯ ಬಾಗಿಲನ್ನು ಸರಿಪಡಿಸಿದವರು ಹಾನೂನನು ಹಾಗು ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ಅಲ್ಲಿಂದ ತಿಪ್ಪೆಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜಾನೋಹ ಪಟ್ಟಣದಲ್ಲಿ ವಾಸಿಸುವ ಹಾನೂನನೂ ಅವನ ಸಂಗಡಿಗರೂ ಕಣಿವೆ ಬಾಗಿಲನ್ನು ಕಟ್ಟಿ ಅದಕ್ಕೆ ಅಗುಳಿ, ತಿರುಗಣಿ, ಕದಗಳನ್ನಿಟ್ಟು ಭದ್ರಪಡಿಸಿದರು. ಅಲ್ಲದೆ ಒಂದು ಸಾವಿರ ಮೊಳದಷ್ಟು ಉದ್ದದ ಗೋಡೆಯನ್ನು ಕಟ್ಟಿ ತಿಪ್ಪೆಬಾಗಿಲಿನ ತನಕ ಮುಂದುವರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರೂ. ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ 450 ಮೀಟರ್ ಗೋಡೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:13
7 ತಿಳಿವುಗಳ ಹೋಲಿಕೆ  

ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇವಿುನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಲಿಗೆ ಹೋದೆನು.


ಎಷ್ಟಾವೋಲ್, ಚೊರ್ಗಾ, ಅಶ್ನಾ, ಜನೋಹ, ಏಂಗನ್ನೀಮ್,


ಜನೋಹ, ಅದುಲ್ಲಾಮ್ ಇವುಗಳೂ ಇವುಗಳ ಗ್ರಾಮಗಳೂ ಲಾಕೀಷ್ ಊರೂ ಇದರ ಪ್ರಾಂತಗಳೂ ಅಜೇಕವೂ ಅದರ ಗ್ರಾಮಗಳೂ ಯೆಹೂದ ಕುಲದವರ ನಿವಾಸಸ್ಥಾನಗಳು. ಅವರು ಬೇರ್ಷೆಬದಿಂದ ಹಿನ್ನೋಮ್ ತಗ್ಗಿನವರೆಗೂ ವಾಸಿಸುತ್ತಿದ್ದರು.


ಅವನು ಯೆರೂಸಲೇವಿುನಲ್ಲಿ ಮೂಲೆಬಾಗಲು, ತಗ್ಗಿನ ಬಾಗಲು, ಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.


ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿಯು ಗೆದೋರ್ಯರ ಮೂಲಪುರುಷನಾದ ಯೆರೆದ್, ಸೋಕೋವಿನವರ ಮೂಲಪುರುಷನಾದ ಹೆಬೆರ್, ಜಾನೋಹದವರ ಮೂಲಪುರುಷನಾದ ಯೆಕೂತೀಯೇಲ್ ಇವರನ್ನು ಹೆತ್ತಳು.


ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ;


ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವದಕ್ಕೆ ಮಾರ್ಗವಿಲ್ಲದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ತಗ್ಗಿನ ಬಾಗಲಿನಿಂದ ಮನೆಗೆ ಬಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು