Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:3 - ಕನ್ನಡ ಸತ್ಯವೇದವು J.V. (BSI)

3 ಮೀನುಬಾಗಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅವುಗಳಿಗೆ ಹೊಸ್ತಿಲುಗಳನ್ನಿಟ್ಟು ಅದಕ್ಕೆ ಬಾಗಿಲು ತಿರುಗುಣಿ ಅಗುಳಿಗಳನ್ನು ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹಸ್ಸೆನಾಹನ ಗಂಡುಮಕ್ಕಳು ಮೀನುಬಾಗಿಲನ್ನು ಕಟ್ಟಿ ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದಗಳು, ಅಗುಳಿ, ತಿರುಗಣಿಗಳನ್ನಿಟ್ಟು ಭದ್ರಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೀನು ಬಾಗಿಲನ್ನು ಪುನಃ ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು, ಅದಕ್ಕೆ ಬಾಗಿಲು, ತಿರುಗಣಿ ಅಗುಳಿಗಳನ್ನು ಹಚ್ಚಿದರು. ಅಲ್ಲಿಂದ ಮುಂದಕ್ಕೆ ಗೋಡೆಯನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:3
11 ತಿಳಿವುಗಳ ಹೋಲಿಕೆ  

ಅಲ್ಲಿಂದ ಎಫ್ರಾಯೀಮ್ ಬಾಗಲು, ಯೆಷಾನಾ ಬಾಗಲು, ಮೀನು ಬಾಗಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಲಿನವರೆಗೂ ಹೋಗಿ ಸೆರೆಮನೆಯ ಬಾಗಲಿನ ಬಳಿಯಲ್ಲಿ ನಿಂತೆವು.


ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನು ಬಾಗಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದ ನಗರದ ಹೊರಗಣ ಬಲು ಎತ್ತರವಾದ ಗೋಡೆಯನ್ನು ಕಟ್ಟಿಸಿ ಯೆಹೂದದೇಶದ ಕೋಟೆ ಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಪತಿಗಳನ್ನಿರಿಸಿದನು.


ಅದೇ ದಿನದಲ್ಲಿ ಮೀನುಬಾಗಿಲಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿಂದ ಧಡಮ್ ಎನ್ನುವ ಶಬ್ದ, ಅಂತು ದೊಡ್ಡ ಗದ್ದಲವಾಗುವದು; ಇದು ಯೆಹೋವನ ನುಡಿ.


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೂ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಬೇಕು ಎಂದು ಬಿನ್ನವಿಸಲು ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದದ್ದರಿಂದ


ಗೋಡೆಯನ್ನು ಕಟ್ಟಿ ತೀರಿಸಿದ ನಂತರ ನಾನು ಕದಗಳನ್ನು ಹಚ್ಚಿಸಿದೆನು; ದ್ವಾರಪಾಲಕರೂ ಗಾಯಕರೂ ಲೇವಿಯರೂ ನೇವಿುಸಲ್ಪಟ್ಟರು.


ನಾನು ಗೋಡೆಯನ್ನು ಕಟ್ಟಿಸಿ ತೀರಿಸಿ ಬಾಗಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸದಿದ್ದರೂ ಎಲ್ಲಾ ಸಂದುಗಳನ್ನು ಕೂಡಿಸಿದ ಸಂಗತಿಯು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ


ಹಳೆಯದು ಎಂಬ ಬಾಗಲನ್ನು ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು.


ಅಲ್ಲಿಂದ ಮುಂದಕ್ಕೆ ಗೋಡೆಯನ್ನು ಜೀರ್ಣೋದ್ಧಾರಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾನನ ಮಗನಾದ ಚಾದೋಕ್; ಮುಂದಕ್ಕೆ ತೆಕೋವದವರು.


ಆತನು ನಿನ್ನ ಹೆಬ್ಬಾಗಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ; ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು