Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:18 - ಕನ್ನಡ ಸತ್ಯವೇದವು J.V. (BSI)

18 ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪೌಳಿಗೋಡೆಯನ್ನು ಕಟ್ಟುವವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಂಡು ಕಟ್ಟುತ್ತಿದ್ದನು. ನಾನಂತೂ ಕೊಂಬೂದುವವನೊಬ್ಬನನ್ನು ನನ್ನ ಬಳಿಯಲ್ಲಿರಿಸಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕಟ್ಟುವವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಳ್ಳುತ್ತ ಇದ್ದನು. ನಾನಂತೂ ಕಹಳೆ ಊದುವವನೊಬ್ಬನನ್ನು ನನ್ನ ಬಳಿಯಲ್ಲೇ ಇರಿಸಿಕೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಕೆಲಸಗಾರರು ತಮ್ಮ ಖಡ್ಗಗಳನ್ನು ಸೊಂಟಕ್ಕೆ ಬಿಗಿದುಕೊಂಡೇ ಕೆಲಸ ಮಾಡಿದರು. ಜನರನ್ನು ಎಚ್ಚರಗೊಳಿಸಲು ತುತ್ತೂರಿ ಊದುವವನು ನನ್ನ ಬಳಿಯಲ್ಲಿಯೇ ನಿಂತಿರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಕಟ್ಟುವವರಲ್ಲಿ ಪ್ರತಿಯೊಬ್ಬರೂ ತಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವವನು ನನ್ನ ಬಳಿಯಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:18
6 ತಿಳಿವುಗಳ ಹೋಲಿಕೆ  

ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ಬಿಡಿಸುವನು.


ನಾನು ಜನರಿಗೆ - ಕತ್ತಿ ಬಿಲ್ಲು ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬೈಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿ


ಅದೇ ಪ್ರಕಾರ ಪ್ರಭುಗಳೂ ಗೋಡೆಕಟ್ಟುವ ಯೆಹೂದ್ಯರ ಹಿಂದೆ ನಿಂತರು. ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತುಕೊಳ್ಳುತ್ತಾ ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಿದ್ದರು.


ಶ್ರೀಮಂತರಿಗೂ ಅಧಿಕಾರಿಗಳಿಗೂ ಉಳಿದ ಜನರಿಗೂ - ನಾವು ಮಾಡುವ ಕೆಲಸವು ಬಲುದೊಡ್ಡದೂ ಅನೇಕ ಸ್ಥಳಗಳಲ್ಲಿ ನಡೆಯುವಂಥದೂ ಆಗಿದೆ; ನಾವು ಗೋಡೆಯ ಮೇಲೆ ಚದರಿ ಒಬ್ಬರಿಗೊಬ್ಬರು ದೂರವಾಗಿರುತ್ತೇವೆ.


ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸ್ವಜನರನ್ನು ಎಚ್ಚರಿಸಿದರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು