ನೆಹೆಮೀಯ 4:23 - ಕನ್ನಡ ಸತ್ಯವೇದವು J.V. (BSI)23 ನಾನೂ ನನ್ನ ಸಹೋದರರೂ ಸೇವಕರೂ ಮೈಗಾವಲಿನವರೂ ಸ್ನಾನಸಮಯದಲ್ಲಿ ಹೊರತು ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನೂ ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ನಮ್ಮ ಬಟ್ಟೆಗಳನ್ನು ಬದಲಾಯಿಸಿರಲಿಲ್ಲ. ಪ್ರತಿಯೊಬ್ಬನು ನೀರನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾನು, ನನ್ನ ಸಹೋದರರು, ಸೇವಕರು ಹಾಗು ಮೈಗಾವಲಿನವರು ಸ್ನಾನ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ಬಟ್ಟೆಗಳನ್ನು ತೆಗೆದುಹಾಕುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಇದರಿಂದಾಗಿ ಯಾರೂ ತಮ್ಮ ವಸ್ತ್ರಗಳನ್ನು ಬದಲಾಯಿಸಲಿಲ್ಲ. ನಾನಾಗಲಿ ನನ್ನ ಬಂಧುಗಳಾಗಲಿ ನನ್ನ ಜನರಾಗಲಿ ಪಹರೆಯವರಾಗಲಿ ವಸ್ತ್ರಗಳನ್ನು ಬದಲಾಯಿಸದೆ ಆಯುಧಗಳನ್ನು ಧರಿಸಿಕೊಂಡೇ ಇದ್ದೆವು. ನೀರು ಕುಡಿಯುವಾಗಲೂ ಆಯುಧ ಸನ್ನದ್ಧರಾಗಿರುತ್ತಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾನೂ, ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ಸ್ನಾನದ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ. ಅಧ್ಯಾಯವನ್ನು ನೋಡಿ |