ನೆಹೆಮೀಯ 4:4 - ಕನ್ನಡ ಸತ್ಯವೇದವು J.V. (BSI)4 ನಮ್ಮ ದೇವರೇ ಕೇಳು; ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆ ಹೋಗುವಂತೆ ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನಮ್ಮ ದೇವರೇ ಆಲಿಸಿ: ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡಿ. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೆಹೆಮೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ, “ನಮ್ಮ ದೇವರೇ, ನಮ್ಮ ಪ್ರಾರ್ಥನೆಗೆ ಕಿವಿಗೊಡು. ಆ ಮನಷ್ಯರು ನಮ್ಮನ್ನು ದ್ವೇಷಿಸುತ್ತಾರೆ. ಸನ್ಬಲ್ಲಟನು ಮತ್ತು ಟೋಬೀಯನು ನಮ್ಮನ್ನು ಅವಮಾನ ಮಾಡುತ್ತಿದ್ದಾರೆ. ಆ ಕೇಡುಗಳು ಅವರಿಗೇ ಸಂಭವಿಸಲಿ. ಅವರು ನಾಚಿಕೆಯಿಂದ ತಲೆತಗ್ಗಿಸಲಿ; ಸೆರೆಹಿಡಿಯಲ್ಪಟ್ಟವರಂತೆ ಅವಮಾನ ಹೊಂದಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಮ್ಮ ದೇವರೇ, ಆಲಿಸಿರಿ; ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ. ನೀವು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ಬರಮಾಡಿ, ಸೆರೆಯ ದೇಶದಲ್ಲಿ ಅವರನ್ನು ಸೂರೆಯಾಗಿ ಒಪ್ಪಿಸಿರಿ. ಅಧ್ಯಾಯವನ್ನು ನೋಡಿ |