Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:5 - ಕನ್ನಡ ಸತ್ಯವೇದವು J.V. (BSI)

5 ಅವರ ಅಪರಾಧವನ್ನು ಕ್ಷವಿುಸಬೇಡ; ನಿನ್ನೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರ ಅಪರಾಧವನ್ನು ಕ್ಷಮಿಸಬೇಡ; ನಿನ್ನೆದುರಿಗಿರುವ ಅವರ ಅಪರಾಧವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿ ಕೋಪಗೊಳಿಸಿದ್ದಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರ ಅಪರಾಧವನ್ನು ಕ್ಷಮಿಸಬೇಡಿ. ನಿಮ್ಮೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡಿ. ಏಕೆಂದರೆ ಕಟ್ಟುವವರ ಮುಂದೆಯೇ ಅವರು ನಿಮ್ಮನ್ನು ಕೆಣಕಿದ್ದಾರೆ,” ಎಂದು ನಾನು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ನಿನ್ನ ದೃಷ್ಟಿಯಲ್ಲಿ ಮಾಡಿದ ಪಾಪಗಳನ್ನು ಮನ್ನಿಸಬೇಡ. ಅವರು ಗೋಡೆಯನ್ನು ಕಟ್ಟುವ ನಿನ್ನ ದಾಸರನ್ನು ನಿಂದಿಸಿ ಅವರನ್ನು ನಿರುತ್ಸಾಹಗೊಳಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಕಟ್ಟುವವರ ಮುಂದೆ ನಿಮ್ಮನ್ನು ಕೆಣಕಿದ್ದರಿಂದ ನೀವು ಅವರ ಅಪರಾಧವನ್ನು ಮುಚ್ಚಬೇಡಿರಿ. ನಿಮ್ಮ ಮುಂದೆ ಇರುವ ಅವರ ಪಾಪಗಳನ್ನು ಅಳಿಸಿಬಿಡಬೇಡಿರಿ ಎಂದು ನಾನು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:5
14 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ; ಅವರ ಅಪರಾಧವನ್ನು ಕ್ಷವಿುಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ; ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.


ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ನನ್ನ ದೋಷಕ್ಕೆ ವಿಮುಖನಾಗು; ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.


ಆದರೂ ನಾವು ಕಟ್ಟುವ ಕೆಲಸವನ್ನು ಮುಂದರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಜೋಡನೆಯಾಯಿತು.


ಹೀಗಿರಲು ಅಧಮರಾಗಲಿ ಉತ್ತಮರಾಗಲಿ ತಗ್ಗಿಸಲ್ಪಡುವರು; (ಅವರನ್ನು ಕ್ಷವಿುಸಬೇಡ).


ಅವರು ಮಾಡಿದ ಕೆಡುಕೆಲ್ಲಾ ನಿನ್ನ ಚಿತ್ತಕ್ಕೆ ಮುಟ್ಟಲಿ; ನೀನು ನನ್ನ ಎಲ್ಲಾ ದ್ರೋಹಗಳಿಗೆ ಪ್ರತಿಯಾಗಿ ನನಗೆ ಮಾಡಿದಂತೆ ಅವರಿಗೂ ಮಾಡು; ನನ್ನ ನರಳಾಟವು ಬಹಳವಾಗಿದೆ, ನನ್ನ ಎದೆಯು ಕುಂದಿದೆ.


ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು