Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:6 - ಕನ್ನಡ ಸತ್ಯವೇದವು J.V. (BSI)

6 ಆದರೂ ನಾವು ಕಟ್ಟುವ ಕೆಲಸವನ್ನು ಮುಂದರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಜೋಡನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೂ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಅದಕ್ಕೆ ಮನಸ್ಸು ಕೊಟ್ಟಿದ್ದರಿಂದ ಗೋಡೆಯೆಲ್ಲಾ ಅರ್ಧ ಎತ್ತರದವರೆಗೂ ಸಮನಾಗಿ ಕಟ್ಟಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಾದ ಮೇಲೆ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಮನಸ್ಸುಮಾಡಿ ಅರ್ಧಗೋಡೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮಿನ ಗೋಡೆಯನ್ನು ನಾವು ಕಟ್ಟಿ ಮುಗಿಸಿದೆವು. ಪಟ್ಟಣದ ಸುತ್ತಲೂ ಪೌಳಿಗೋಡೆಯನ್ನು ಕಟ್ಟಿದೆವು. ಆದರೆ ಅದರ ಎತ್ತರ ಇರಬೇಕಾದಷ್ಟು ಇರದೆ ಅರ್ಧದ ತನಕ ಇದ್ದವು. ನಮ್ಮ ಜನರು ತಮ್ಮ ಹೃದಯ ಪೂರ್ವಕವಾಗಿ ಕೆಲಸ ಮಾಡಿದ್ದುದರಿಂದ ನಮಗೆ ಅಷ್ಟಾದರೂ ಮಾಡುವುದಕ್ಕೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೀಗೆ ನಾವು ಪುನಃ ಗೋಡೆ ಕಟ್ಟುವುದನ್ನು ಮುಂದುವರಿಸಿದೆವು. ಗೋಡೆ ಅರ್ಧ ಎತ್ತರದವರೆಗೂ ಆಯಿತು. ಏಕೆಂದರೆ ಜನರು ಕೆಲಸ ಮಾಡುವುದಕ್ಕೆ ಮನಸ್ಸುಳ್ಳವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:6
13 ತಿಳಿವುಗಳ ಹೋಲಿಕೆ  

ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ತೀರಿತು. ಅದನ್ನು ಕಟ್ಟುವದಕ್ಕೆ ಒಟ್ಟು ಐವತ್ತೆರಡು ದಿನಗಳು ಹಿಡಿದವು.


ನಾವು ಈ ಪ್ರಕಾರ ಸ್ವೇಚ್ಫೆಯಿಂದ ಕಾಣಿಕೆಗಳನ್ನು ಸಮರ್ಪಿಸಲು ಶಕ್ತಿಹೊಂದಿದ್ದಕ್ಕೆ ನಾನಾಗಲಿ ನನ್ನ ಪ್ರಜೆಗಳಾಗಲಿ ಎಷ್ಟರವರು? ಸಮಸ್ತವು ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ನಾನು ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ ನನ್ನ ದೇವರ ಆಲಯದ ಮೇಲಣ ಅನುರಾಗದಿಂದ ಅದಕ್ಕೋಸ್ಕರ ನನ್ನ ಸ್ವಂತ ಸೊತ್ತಿನಿಂದ


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.


ಹೀಗೆ ಯೆಹೋವನ ಆಲಯದ ಸೇವಾಕ್ರಮವು ಪುನಃಸ್ಥಾಪಿತವಾಯಿತು. ಯಾರೂ ನೆನಸದೆ ಇರುವಲ್ಲಿ ದೇವರು ತಾನೇ ತನ್ನ ಪ್ರಜೆಗಳಿಗೋಸ್ಕರ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲಾ ಜನರೂ ಸಂತೋಷಿಸಿದರು.


ಅವರ ಅಪರಾಧವನ್ನು ಕ್ಷವಿುಸಬೇಡ; ನಿನ್ನೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡ. ಕಟ್ಟುವವರ ಮುಂದೆಯೇ ಅವರು ನಿನ್ನನ್ನು ಕೆಣಕಿದ್ದಾರಲ್ಲಾ.


ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನಿಯರೂ ಅಷ್ಡೋದಿನವರೂ ಯೆರೂಸಲೇವಿುನ ಗೋಡೆಯ ಜೀರ್ಣೋದ್ಧಾರಕಾರ್ಯವು ಮುಂದರಿದು ಅದರ ಸಂದುಗಳು ತಿರಿಗಿ ಕೂಡುತ್ತಾ ಬರುವದನ್ನು ಕೇಳಿ ಬಹುಕೋಪವುಳ್ಳವರಾಗಿ -


ಯೆರೂಸಲೇಮೇ, ನೀನು ಸರಿಯಾದ ಹೊಂದಿಕೆಯಿಂದ ಕಟ್ಟಲ್ಪಟ್ಟ ನಗರವಾಗಿದ್ದೀ.


ಕೂಡಲೆ ಶೆಯಲ್ತೀಯೇಲನ ಮಗನೂ ಯೆಹೂದ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವೆಲ್ಲರ ಮನಸ್ಸುಗಳನ್ನು ಯೆಹೋವನು ಪ್ರೇರಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು