ನೆಹೆಮೀಯ 4:7 - ಕನ್ನಡ ಸತ್ಯವೇದವು J.V. (BSI)7 ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನಿಯರೂ ಅಷ್ಡೋದಿನವರೂ ಯೆರೂಸಲೇವಿುನ ಗೋಡೆಯ ಜೀರ್ಣೋದ್ಧಾರಕಾರ್ಯವು ಮುಂದರಿದು ಅದರ ಸಂದುಗಳು ತಿರಿಗಿ ಕೂಡುತ್ತಾ ಬರುವದನ್ನು ಕೇಳಿ ಬಹುಕೋಪವುಳ್ಳವರಾಗಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸನ್ಬಲ್ಲಟನೂ, ಟೋಬೀಯನೂ, ಅರಬಿಯರೂ, ಅಮ್ಮೋನಿಯರೂ, ಅಷ್ಡೋದಿನವರೂ ಯೆರೂಸಲೇಮಿನ ಗೋಡೆಯ ಜೀರ್ಣೋದ್ಧಾರ ಕಾರ್ಯವು ಮುಂದುವರಿದು, ಅದರ ಸಂದುಗಳು ತಿರುಗಿ ಸರಿಯಾಗುತ್ತಾ ಬರುವುದನ್ನು ಕೇಳಿ ಬಹುಕೋಪಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸನ್ಬಲ್ಲಟನು, ಟೋಬೀಯನು, ಅರೇಬಿಯರು, ಅಮ್ಮೋನಿಯರು ಹಾಗು ಅಷ್ಡೋದಿನವರು ಜೆರುಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂಬುದನ್ನು ಕೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸನ್ಬಲ್ಲಟನು, ಟೋಬೀಯನು, ಅರಬಿಯರು, ಅಮ್ಮೋನಿಯರು ಮತ್ತು ಅಷ್ಡೋದಿನವರು ತುಂಬಾ ಕೋಪಗೊಂಡಿದ್ದರು. ಯಾಕೆಂದರೆ ಜೆರುಸಲೇಮಿನ ಗೋಡೆಯ ಕೆಲಸ ಮುಂದುವರಿಯುತ್ತಿದೆಯೆಂದೂ ಮತ್ತು ಗೋಡೆಗಳ ಕಿಂಡಿಗಳನ್ನು ರಿಪೇರಿ ಮಾಡಲಾಗುತ್ತಿದೆಯೆಂದೂ ಅವರು ಕೇಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆರೂಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂದು ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನ್ಯರೂ ಅಷ್ಡೋದ್ಯರೂ ಕೇಳಿದಾಗ ಬಹು ಕೋಪಗೊಂಡರು. ಅಧ್ಯಾಯವನ್ನು ನೋಡಿ |