ನೆಹೆಮೀಯ 5:11 - ಕನ್ನಡ ಸತ್ಯವೇದವು J.V. (BSI)11 ಅವರ ಹೊಲ, ದ್ರಾಕ್ಷೇತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ಶೇಕಡಾ ಇಷ್ಟೆಂದು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈಹೊತ್ತೇ ಹಿಂದಕ್ಕೆ ಕೊಡಿರಿ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರ ಹೊಲ, ದ್ರಾಕ್ಷೀತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟುಬಿಡಿ. ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವರಿಂದ ಕಿತ್ತುಕೊಂಡ ಹೊಲಗದ್ದೆಗಳನ್ನು, ದ್ರಾಕ್ಷಾತೋಟ, ಎಣ್ಣೆಮರಗಳ ತೋಟ ಮತ್ತು ಅವರ ಮನೆಗಳನ್ನು ಅವರಿಗೆ ಈಗಲೇ ಹಿಂದಕ್ಕೆ ಕೊಡಿರಿ. ಅವರಿಂದ ವಸೂಲಿ ಮಾಡಿದ ಬಡ್ಡಿಯನ್ನು ಹಿಂದಕ್ಕೆ ಕೊಡಿರಿ. ನೀವು ಯಾವ ಯಾವದಕ್ಕೆ ಬಡ್ಡಿ ವಸೂಲಿ ಮಾಡಿರುವಿರೋ ಎಲ್ಲವನ್ನು ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರ ಹೊಲ, ದ್ರಾಕ್ಷಿತೋಟ, ಓಲಿವ್ ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟು ಬಿಡಿ; ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿ ಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ. ಅಧ್ಯಾಯವನ್ನು ನೋಡಿ |