ನೆಹೆಮೀಯ 5:18 - ಕನ್ನಡ ಸತ್ಯವೇದವು J.V. (BSI)18 ಪ್ರತಿದಿನ ಒಂದು ಹೋರಿ ಆರು ಕೊಬ್ಬಿದ ಕುರಿ ಕೆಲವು ಕೋಳಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿವಸಕ್ಕೊಮ್ಮೆ ನಾನು ಎಲ್ಲಾ ತರದ ದ್ರಾಕ್ಷಾರಸವನ್ನು ಬೇಕಾಗುವಷ್ಟು ಒದಗಿಸಿಕೊಡುತ್ತಿದ್ದೆನು. ನನಗೆ ಇಷ್ಟು ವೆಚ್ಚವಾಗುತ್ತಿದ್ದರೂ ಆ ಜನರು ಮಾಡತಕ್ಕ ಕೆಲಸವು ಬಹು ಭಾರವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಆಯವನ್ನು ಕೇಳಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕರು, ಕೆಲವು ಕೋಳಿಗಳು ನಮ್ಮ ಭೋಜನಕ್ಕಾಗಿ ಸಿದ್ಧ ಆಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲ ತರದ ದ್ರಾಕ್ಷಾರಸವನ್ನು ಬೇಕಾಗುವಷ್ಟು ಒದಗಿಸಿಕೊಡುತ್ತಿದ್ದೆ. ನನಗೆ ಇಷ್ಟೆಲ್ಲಾ ವೆಚ್ಚ ಆಗುತ್ತಿದ್ದರೂ, ಆ ಜನರು ಮಾಡಬೇಕಾಗಿದ್ದ ಕೆಲಸ ಬಹುಕಷ್ಟಕರವಾಗಿದ್ದುದರಿಂದ, ನಾನು ರಾಜಪಾಲನೆಗೆ ಸಲ್ಲತಕ್ಕ ಭತ್ಯವನ್ನು ವಸೂಲಿ ಮಾಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಪ್ರತಿದಿನ ನಮ್ಮ ಊಟಕ್ಕಾಗಿ ಒಂದು ಹೋರಿಯನ್ನು, ಆರು ಕೊಬ್ಬಿದ ಕುರಿಗಳನ್ನು ಮತ್ತು ಅನೇಕ ಕೋಳಿಗಳನ್ನು ಕೊಯ್ಯಲಾಗುತ್ತಿತ್ತು; ಹತ್ತುದಿನಕ್ಕೊಮ್ಮೆ ವಿವಿಧ ರೀತಿಯ ದ್ರಾಕ್ಷಾರಸವನ್ನು ಒದಗಿಸಿಕೊಡುತ್ತಿದ್ದೆನು. ಆದರೂ ರಾಜ್ಯಪಾಲನಿಗೆ ಸಲ್ಲಬೇಕಾಗಿದ್ದ ಆಹಾರಪದಾರ್ಥಗಳನ್ನು ನಾನೆಂದೂ ಕೇಳಲಿಲ್ಲ; ಅದಕ್ಕಾಗಿ ಜನರಿಂದ ತೆರಿಗೆ ತೆಗೆದುಕೊಳ್ಳಲಿಲ್ಲ. ಯಾಕೆಂದರೆ ನನ್ನ ಜನರು ಮಾಡುವ ಕೆಲಸವು ತುಂಬಾ ಪ್ರಯಾಸಕರವಾದದ್ದೆಂದು ನನಗೆ ಗೊತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಪ್ರತಿದಿನಕ್ಕೆ ಒಂದು ಎತ್ತು, ಉತ್ತಮವಾದ ಆರು ಕುರಿಗಳು, ಕೋಳಿಗಳು, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವು ನನಗೋಸ್ಕರ ಸಿದ್ಧವಾಗುತ್ತಿದ್ದವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದುದರಿಂದ ನಾನು ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ಬೇಡಲಿಲ್ಲ. ಅಧ್ಯಾಯವನ್ನು ನೋಡಿ |