Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:19 - ಕನ್ನಡ ಸತ್ಯವೇದವು J.V. (BSI)

19 ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನೂ ನನ್ನ ಹಿತಕ್ಕಾಗಿ ನೆನಪು ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಅನುಗ್ರಹಿಸು ಎಂದು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ‘ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಉಪಕಾರವನ್ನು ನೆನೆಸಿಕೊಂಡು ನನಗೆ ಒಳಿತನ್ನು ಅನುಗ್ರಹಿಸಿ!’ ಎಂದು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರೇ, ನಾನು ಈ ಜನರಿಗಾಗಿ ಮಾಡಿರುವ ಒಳ್ಳೆಯದನ್ನೆಲ್ಲಾ ಜ್ಞಾಪಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಎಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಮಾಡಿರಿ,” ಎಂದು ಪ್ರಾರ್ಥಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:19
13 ತಿಳಿವುಗಳ ಹೋಲಿಕೆ  

ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.


ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ.


ಯೆಹೋವನೇ, ನನ್ನನ್ನು ನೆನಪುಮಾಡಿಕೊಂಡು ನಿನ್ನ ಪ್ರಜೆಗೆ ತೋರಿಸುವ ದಯೆಯನ್ನು ನನಗೂ ತೋರಿಸು. ನನ್ನನ್ನು ರಕ್ಷಿಸಲಿಕ್ಕೆ ಬಾ,


ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ನೀವು ಕ್ರಿಸ್ತನವರೆಂದು ನಿಮಗೆ ಯಾವನಾದರೂ ಒಂದು ತಂಬಿಗೆ ನೀರನ್ನು ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ನಾನಾದರೋ ಕುಗ್ಗಿದವನೂ ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ ರಕ್ಷಕನೂ ಆಗಿದ್ದೀ; ತಡಮಾಡಬೇಡ.


ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ಉಪಕಾರ ಮಾಡಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು