Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:2 - ಕನ್ನಡ ಸತ್ಯವೇದವು J.V. (BSI)

2 ಕೆಲವರು - ನಾವೂ ನಮ್ಮ ಗಂಡುಹೆಣ್ಣು ಮಕ್ಕಳೂ ಬಹುಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಕಾಳುಕಡ್ಡಿಗಳನ್ನು ಹೇಗಾದರೂ ಸಂಪಾದಿಸಿಕೊಳ್ಳೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರಲ್ಲಿ ಕೆಲವರು, “ನಾವೂ ನಮ್ಮ ಗಂಡು ಹೆಣ್ಣು ಮಕ್ಕಳೂ ಬಹು ಮಂದಿ ಇದ್ದೇವೆ; ನಮ್ಮ ಜೀವನಕ್ಕಾಗಿ ಧಾನ್ಯವು ಬೇಕಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕೆಲವರು, “ನಮಗೆ ಗಂಡುಹೆಣ್ಣು ಮಕ್ಕಳು ಬಹುಮಂದಿ ಇದ್ದಾರೆ; ನಮ್ಮ ಜೀವನಕ್ಕಾಗಿ ಕಾಳುಕಡ್ಡಿಗಳನ್ನು ಹೇಗಾದರೂ ಸಂಪಾದಿಸಿಕೊಳ್ಳಬೇಕಾಗಿ ಇದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೆಲವರು ಹೀಗಂದರು: “ನಮ್ಮ ಮನೆಯಲ್ಲಿ ಬಹಳ ಮಕ್ಕಳಿದ್ದಾರೆ. ನಮಗೆ ಊಟಮಾಡಲು ಸಾಕಷ್ಟು ದವಸಧಾನ್ಯವಿಲ್ಲ; ಹೀಗಿರಲು ನಾವು ಜೀವಂತವಾಗಿ ಉಳಿಯುವ ಸಾಧ್ಯತೆಯಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರಲ್ಲಿ ಕೆಲವರು, “ನಾವೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ಅನೇಕರಾದುದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತೆಗೆದುಕೊಳ್ಳೋಣ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:2
11 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮಂದಟ್ಟುಮಾಡಿಕೊಳ್ಳದಿದ್ದರೆ ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮಂದಟ್ಟುಮಾಡಿಕೊಳ್ಳದ ಕಾರಣ ಅವುಗಳನ್ನು ಶಪಿಸೇ ಇದ್ದೇನೆ.


ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ - ನೀನೂ ನಾವೂ ನಮ್ಮ ಮಕ್ಕಳೂ ಎಲ್ಲರೂ ಸಾಯದೆ ಬದುಕಿಕೊಳ್ಳುವಂತೆ ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡಪ್ಪಾ; ನಾವು ಹೊರಟು ಹೋಗುವೆವು.


ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಕೇಳಿದ್ದೇನೆ; ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದ್ದರಿಂದ


ಇದಲ್ಲದೆ ಭೂಲೋಕದಲ್ಲೆಲ್ಲಾ ಬರವು ಭಯಂಕರವಾಗಿದ್ದದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.


ಹಣವನ್ನಾಗಲಿ ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವದನ್ನಾಗಲಿ


ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು.


ಇನ್ನು ಕೆಲವರು - ನಮ್ಮ ಹೊಲ ತೋಟಮನೆಗಳನ್ನು ಒತ್ತೆ ಹಾಕಿ ಆಯಿತು; ಈ ಬರಗಾಲದಲ್ಲಿ ಧಾನ್ಯವನ್ನು [ಹೇಗಾದರೂ] ಸಂಪಾದಿಸಿಕೊಳ್ಳೋಣ;


ನೀವು ಬಿತ್ತಿದ ಬೀಜವು ಬಹಳ, ತಂದ ಫಲವು ಸ್ವಲ್ಪ; ತಿನ್ನುತ್ತೀರಿ, ತೃಪ್ತಿಯಾಗದು, ಕುಡಿಯುತ್ತೀರಿ, ಆನಂದವಾಗದು; ಹೊದಿಯುತ್ತೀರಿ, ಬೆಚ್ಚಗಾಗದು; ಸಂಬಳಗಾರನು ಸಂಬಳಹಾಕುವ ಚೀಲವು ತೂತಿನದು.


ನಿನ್ನ ಕಣ್ಣೆದುರಿಗೆ ನಾವು ಯಾಕೆ ಸಾಯಬೇಕು; ನಮ್ಮ ಭೂವಿುಯು ಯಾಕೆ ಹಾಳಾಗಬೇಕು. ನಮ್ಮನ್ನೂ ನಮ್ಮ ಭೂವಿುಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂವಿುಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂವಿುಯು ಹಾಳು ಬೀಳಬಾರದಿದ್ದರೆ ನೀನು ಬೀಜವನ್ನು ಕೊಡಬೇಕೆಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು