Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:9 - ಕನ್ನಡ ಸತ್ಯವೇದವು J.V. (BSI)

9 ಆಮೇಲೆ ನಾನು ಅವರಿಗೆ - ನೀವು ಮಾಡಿದ್ದು ಒಳ್ಳೇದಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆನಂತರ ನಾನು ಅವರಿಗೆ, “ನೀವು ಮಾಡುತ್ತಿರುವುದು ಒಳ್ಳೆಯ ಕಾರ್ಯವಲ್ಲ; ನಾವು ನಮ್ಮ ವಿರೋಧಿಗಳಾಗಿರುವ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾನು ಹೇಳುವುದನ್ನು ಮುಂದುವರಿಸುತ್ತಾ, “ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ದೇವರಿಗೆ ಭಯಪಟ್ಟು ಆತನನ್ನು ಗೌರವಿಸಬೇಕೆಂದು ನಿಮಗೆ ಗೊತ್ತಿದೆ. ಇತರ ಜನರು ಮಾಡುವ ನಾಚಿಕೆಕರವಾದ ಕೆಲಸವನ್ನು ನೀವು ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:9
21 ತಿಳಿವುಗಳ ಹೋಲಿಕೆ  

ನೀವು ಅವನಿಂದ ಬಡ್ಡಿಯನ್ನಾಗಲಿ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವದಕ್ಕೆ ಆಸ್ಪದ ಕೊಟ್ಟದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವದು


ಮನೆಯಲ್ಲೇ ಕೆಲಸಮಾಡುವವರೂ ಸುಶೀಲೆಯರೂ ನಿಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ಬುದ್ಧಿ ಕಲಿಸುವ ಹಾಗೆ ಬೋಧಿಸು.


ಆದದರಿಂದ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಯಜಮಾನಿಯರಾಗಿರುವದು ನನಗೆ ಒಳ್ಳೇದಾಗಿ ತೋಚುತ್ತದೆ; ಹಾಗೆ ಮಾಡುವದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.


ನಿಮ್ಮ ದೆಸೆಯಿಂದ ಅನ್ಯಜನರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತದೆಂದು ಬರೆದದೆಯಲ್ಲಾ.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಓಹೋ, ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ ಎಂದೆನ್ನಿಸಿಕೊಂಡು ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತರಲು


ಇವು ಕೂಡ ಜ್ಞಾನಿಗಳ ಉಕ್ತಿಗಳೇ: - ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.


ತಿಳುವಳಿಕೆಯಿಲ್ಲದೆ ಕೋರುವದು ಅಯುಕ್ತ; ದುಡುಕುವ ಕಾಲು ದಾರಿ ತಪ್ಪುವದು.


ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವದು ಅಧರ್ಮ.


ಶಿಷ್ಟನಿಗೆ ದಂಡ ಅಯುಕ್ತ; ಧರ್ಮಿಷ್ಟನಿಗೆ ಪೆಟ್ಟು ಅಧರ್ಮ.


ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ ದುರ್ಮಾರ್ಗಕ್ಕೆ ಎಳೆಯುವನು.


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ನಮ್ಮ ದೇವರೇ ಕೇಳು; ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆ ಹೋಗುವಂತೆ ಮಾಡು.


ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೇದಲ್ಲ.


ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಅದಕ್ಕೆ ಅಬ್ರಹಾಮನು - ಈ ಸ್ಥಳದವರು ದೇವರ ಭಯವಿಲ್ಲದವರಾಗಿ ನನ್ನ ಹೆಂಡತಿಯ ನಿವಿುತ್ತ ನನ್ನನ್ನು ಕೊಂದಾರೆಂದು ನೆನಸಿದೆನು.


ನಾನೂ ನನ್ನ ಸಹೋದರರೂ ಸೇವಕರೂ ಸಹ ಅವರಿಗೆ ಹಣವನ್ನೂ ಧಾನ್ಯವನ್ನೂ ಬಡ್ಡಿಗೆ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.


ನಿನ್ನ ಕೋಪದ ಬಲವನ್ನೂ ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು