ನೆಹೆಮೀಯ 6:11 - ಕನ್ನಡ ಸತ್ಯವೇದವು J.V. (BSI)11 ನಾನು - ನನ್ನಂಥ ಪುರುಷನು ಓಡಿಹೋಗುವದು ಯೋಗ್ಯವೋ? ಇದಲ್ಲದೆ ನನ್ನಂಥವನು ಪ್ರಾಣ ರಕ್ಷಣೆಗಾಗಿ ಪವಿತ್ರಸ್ಥಾನವನ್ನು ಪ್ರವೇಶಿಸುವನೇ? ನಾನು ಬರುವದಿಲ್ಲ ಎಂದು ಉತ್ತರಕೊಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು, “ನನ್ನಂಥ ಪುರುಷನು ಓಡಿಹೋಗುವುದು ಯೋಗ್ಯವೋ? ಇದಲ್ಲದೆ, ನನ್ನಂಥವನು ಪ್ರಾಣರಕ್ಷಣೆಗಾಗಿ ಗರ್ಭಗುಡಿ ಪ್ರವೇಶಿಸಬಹುದೇ? ನಾನು ಬರುವುದಿಲ್ಲ” ಎಂದು ಉತ್ತರಕೊಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ನಾನು, “ನನ್ನಂಥ ಗಂಡು ಓಡಿಹೋಗಿ ಅವಿತುಕೊಳ್ಳುವುದು ಸರಿಯೇ? ಇದಲ್ಲದೆ ಪ್ರಾಣರಕ್ಷಣೆಗಾಗಿ ಗರ್ಭಗುಡಿಯನ್ನು ನಾನು ಪ್ರವೇಶಿಸಬಹುದೇ? ಇಲ್ಲ, ನಾನು ಬರುವುದಿಲ್ಲ,” ಎಂದು ಉತ್ತರಕೊಟ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದಕ್ಕೆ ನಾನು, “ನನ್ನಂಥಾ ಮನುಷ್ಯನು ಓಡಿ ಹೋಗುವನೋ? ನನ್ನಂಥವನು ಬದುಕಬೇಕೆಂದು ದೇವರ ಆಲಯದೊಳಗೆ ಹೋಗಬಹುದೇ? ನಾನು ಒಳಗೆ ಹೋಗುವುದಿಲ್ಲ,” ಎಂದೆನು. ಅಧ್ಯಾಯವನ್ನು ನೋಡಿ |