Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:12 - ಕನ್ನಡ ಸತ್ಯವೇದವು J.V. (BSI)

12 ನಾನು ಸೂಕ್ಷ್ಮವಾಗಿ ವಿಚಾರಮಾಡಿದಾಗ ನನ್ನ ವಿಷಯವಾಗಿ ಆ ಕಾಲಜ್ಞಾನವಚನವನ್ನು ಉಚ್ಚರಿಸುವದಕ್ಕೆ ಇವನನ್ನು ಪ್ರೇರಿಸಿದವನು ದೇವರಲ್ಲ, ಟೋಬೀಯನೂ ಸನ್ಬಲ್ಲಟನೂ ಇವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದರು ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ಸೂಕ್ಷ್ಮವಾಗಿ ವಿಚಾರಮಾಡಿದಾಗ, ನನ್ನ ಬಗ್ಗೆ ಆ ಕಾಲಜ್ಞಾನ ವಚನವನ್ನು ಉಚ್ಚರಿಸುವುದಕ್ಕೆ ಇವನನ್ನು ಪ್ರೇರಿಸಿದವನು ದೇವರಲ್ಲ; ಟೋಬೀಯನೂ ಸನ್ಬಲ್ಲಟನೂ ಇವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದರೆಂದು ನನಗೆ ಗೊತ್ತು ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ಬಲ್ಲಟ್ ಅವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದೇವರು ಅವನನ್ನು ಕಳುಹಿಸಲಿಲ್ಲ. ಟೋಬೀಯನೂ, ಸನ್ಬಲ್ಲಟನೂ ಶೆಮಾಯನಿಗೆ ಲಂಚಕೊಟ್ಟು, ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿಸಿದರೆಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:12
20 ತಿಳಿವುಗಳ ಹೋಲಿಕೆ  

ನಾನು ವ್ಯಥೆಗೊಳಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದರಿಂದಲೂ ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದರಿಂದಲೂ


ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ ದೇವರ ಚಿತ್ತದ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚವಾದ ದ್ರವ್ಯಾಶೆಯಿಂದಲ್ಲ ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆಮಾಡಿರಿ.


ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ


ಅವನು ಕುಡಿದು ಜಗಳವಾಡುವವನೂ ಹೊಡೆದಾಡುವವನೂ ಆಗಿರಬಾರದು; ಸಾತ್ವಿಕನೂ ಕುತರ್ಕ ಮಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು.


ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ.


ದೇವರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನಾದರೂ ವಿಚಾರಿಸಿ ತಿಳಿಕೊಳ್ಳುವದಿಲ್ಲ.


ನಾನು ಯಾರ ಬೆಳ್ಳಿಬಂಗಾರವನ್ನಾಗಲಿ ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ನೀವು ಜವೆಗೋದಿಯ ಹಿಡಿಗಳನ್ನೂ ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವದರಿಂದ ಸಾಯದಿರತಕ್ಕವರನ್ನು ಸಾಯಿಸಿ ಸಾಯತಕ್ಕವರನ್ನು ಉಳಿಸಿ ನನ್ನ ಜನರ ನಡುವೆ ನನ್ನ ಘನತೆಗೆ ಕುಂದು ತಂದಿದ್ದೀರಿ.


ನಾನು ಮಾತಾಡದೆಹೋದರೂ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ವಿುಥ್ಯ, ನೀವು ಹೇಳಿದ ಕಣಿಯು ಸುಳ್ಳು.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ - ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮ್ಮಲ್ಲಿ ವ್ಯರ್ಥನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಹೃದಯಕ್ಕೆ ಹೊಳೆದದ್ದನ್ನೇ ಹೇಳುತ್ತಾರೆ.


ಆಗ ಯೆಹೋವನು ನನಗೆ ಹೀಗೆ ನುಡಿದನು - ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ; ಅವರು ಸುಳ್ಳಾದ ದಿವ್ಯದರ್ಶನವನ್ನೂ ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಮತ್ತು ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾವನೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ನಾನು - ನನ್ನಂಥ ಪುರುಷನು ಓಡಿಹೋಗುವದು ಯೋಗ್ಯವೋ? ಇದಲ್ಲದೆ ನನ್ನಂಥವನು ಪ್ರಾಣ ರಕ್ಷಣೆಗಾಗಿ ಪವಿತ್ರಸ್ಥಾನವನ್ನು ಪ್ರವೇಶಿಸುವನೇ? ನಾನು ಬರುವದಿಲ್ಲ ಎಂದು ಉತ್ತರಕೊಟ್ಟೆನು.


ನಾನು ಅಂಜಿಕೊಂಡು ಇವನ ಮಾತಿನಂತೆ ನಡೆದು ದೋಷಿಯಾಗಿ ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಒಳಗಾಗಲಿ ಎಂದು ಅವರು ಇವನಿಗೆ ಲಂಚಕೊಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು